ಆಚಾರ್ಯ ಚಾಣಕ್ಯರು ನೀಡಿದ ನೀತಿಗಳು(Chanakya Niti) ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಇದಲ್ಲದೆ ಆಚಾರ್ಯ ಚಾಣಕ್ಯ ಅವರು ವಿವಿಧ ವಿಷಯಗಳ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ಸಹ ನೀಡಿದ್ದಾರೆ. ಆಚಾರ್ಯ ಚಾಣಕ್ಯರು ತಮ್ಮ ನೀತಿಗಳ ಸಹಾಯದಿಂದ ಮಹಿಳೆಯರು ಮತ್ತು ಪುರುಷರ ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ಆಚಾರ್ಯ ಚಾಣಕ್ಯ ಅವರ ಪ್ರಕಾರ ಮಹಿಳೆಯರು ಪುರುಷರಿಗಿಂತ ಅನೇಕ ಪಟ್ಟು ಮುಂದಿದ್ದಾರೆ.
ಹಾಗಾದ್ರೆ ಚಾಣುಕ್ಯ ಅವರ ಪ್ರಕಾರ ಯಾವ ವಿಷಯಗಳಲ್ಲಿ ಮಹಿಳೆಯರು ಪುರುಷರಿಗಿಂತ ಮುಂದಿದ್ದಾರೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಮಹಿಳೆಯರು ಪುರುಷರಿಗಿಂತ ಹೆಚ್ಚು ಹಸಿವನ್ನು ಅನುಭವಿಸುತ್ತಾರೆ. ಅವರ ದೇಹಕ್ಕೆ ಪುರುಷರಿಗಿಂತ ಹೆಚ್ಚಿನ ಶಕ್ತಿ ಮತ್ತು ಪೋಷಣೆಯ ಅಗತ್ಯವಿರುತ್ತದೆ. ಅದಕ್ಕಾಗಿಯೇ ಮಹಿಳೆಯರು ಹೆಚ್ಚು ಹಸಿವನ್ನು ಅನುಭವಿಸುತ್ತಾರೆ.
ಆಚಾರ್ಯ ಚಾಣಕ್ಯರ ಪ್ರಕಾರ ಮಹಿಳೆಯರು ಹೆಚ್ಚು ಧೈರ್ಯಶಾಲಿಗಳು. ಅಂದರೆ ಪುರುಷರಿಗಿಂತ ಹೆಚ್ಚು ಧೈರ್ಯ ಮತ್ತು ಸವಾಲುಗಳನ್ನು ಎದುರಿಸುವ ಶಕ್ತಿ ಅವರಲ್ಲಿದೆ. ಮಹಿಳೆಯರು ತಮ್ಮ ಕುಟುಂಬವನ್ನು ರಕ್ಷಿಸಲು ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಲು ಯಾವಾಗಲೂ ಮುಂಚೂಣಿಯಲ್ಲಿರುತ್ತಾರೆ.
ಮಹಿಳೆಯರು ಪುರುಷರಿಗಿಂತ ಹೆಚ್ಚು ಶಕ್ತಿಶಾಲಿಗಳು ಎಂದು ಹೇಳಿದ್ದಾರೆ. ಅವರು ಮಾನಸಿಕವಾಗಿ, ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಹೆಚ್ಚು ಬಲಶಾಲಿಯಾಗಿರುತ್ತಾರೆ. ಇದಲ್ಲದೆ ಮಹಿಳೆಯರಲ್ಲಿ ಹೆಚ್ಚಿನ ಸೂಕ್ಷ್ಮತೆ ಇರುತ್ತದೆ. ಈ ಕಾರಣದಿಂದಾಗಿ ಅವರ ವ್ಯಕ್ತಿತ್ವವು ಪುರುಷರಿಗಿಂತ ಉತ್ತಮವಾಗಿರುತ್ತದೆ.
ಮಹಿಳೆಯರಲ್ಲಿ ಪುರುಷರಿಗಿಂತ ಹೆಚ್ಚು ಬುದ್ಧಿವಂತಿಕೆ ಇದೆ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ಮಹಿಳೆಯರು ತೀಕ್ಷ್ಣ ಮನಸ್ಸಿನವರು ಮತ್ತು ಬುದ್ಧಿವಂತಿಕೆಯಿಂದ ಪುರುಷರಿಗಿಂತ ಉತ್ತಮ ರೀತಿಯಲ್ಲಿ ಅತ್ಯಂತ ಕಷ್ಟಕರವಾದ ಸಂದರ್ಭಗಳನ್ನು ಸಹ ಎದುರಿಸಲು ಸಮರ್ಥರಾಗಿದ್ದಾರೆ. ಅವರ ತ್ವರಿತ ಚಿಂತನೆಯು ಸಾಧ್ಯವಾದಷ್ಟು ಬೇಗ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.