ಬೆಂಗಳೂರು: ಗಾಯಕ ಮತ್ತು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಂಪತಿ ಈಗಾಗಲೇ ವಿಚ್ಛೇದನದ ಮೂಲಕ ತಮ್ಮ ದಾಂಪತ್ಯವನ್ನು ಅಂತ್ಯಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅನೇಕ ವದಂತಿಗಳು ಹುಟ್ಟಿಕೊಂಡವು. ಅವುಗಳ ಬಗ್ಗೆ ಸ್ಪಷ್ಟನೆ ನೀಡಲು ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ.
ಇದನ್ನೂ ಓದಿ: 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ!
ಜೂನ್ 7ರಂದು ನಾವು ಕಾನೂನು ಬದ್ಧವಾಗಿ ಡಿವೋರ್ಸ್ ಪಡೆದಿದ್ದೇವೆ. ಚೆನ್ನಾಗಿದ್ದ ಜೋಡಿ ಯಾಕೆ ಡಿವೋರ್ಸ್ ಪಡೆದರು ಎಂಬ ಬಗ್ಗೆ ಹಲವರಿಗೆ ಅನುಮಾನ ಇದೆ. ಹೀಗಾಗಿ ಈ ಎಲ್ಲದರ ಬಗ್ಗೆ ಸ್ಪಷ್ಟನೆ ಕೊಡುತ್ತೇವೆ ಎಂದು ಚಂದನ್ ಶೆಟ್ಟಿ ಮಾತನಾಡಿದರು.
ನಮ್ಮಿಬ್ಬಿರ ಜೀವನ ಶೈಲಿ ಬೇರೆ ಬೇರೆ ಇದೆ. ಇಬ್ಬರ ನಡುವೆ ಸಾಕಷ್ಟು ಸಮಸ್ಯೆ ಆಗುತ್ತಿತ್ತು. ಸಂಬಂಧ ಸರಿ ಮಾಡಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ ಆಗಲಿಲ್ಲ. ಇಬ್ಬರೂ ಒಮ್ಮತದಿಂದ ಡಿವೋರ್ಸ್ ಪಡೆದಿದ್ದೇವೆ ಎಂದು ಚಂದನ್ ಶೆಟ್ಟಿ ಮಾತನಾಡಿದ್ದಾರೆ.
‘ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ. ಯಾಕೆಂದರೆ ಆ ವ್ಯಕ್ತಿಯ ಮನೆಗೆ ನಾನು ಕೂಡ ಅನೇಕ ಬಾರಿ ಹೋಗಿದ್ದೇನೆ. ತುಂಬ ಒಳ್ಳೆಯ ಕುಟುಂಬ ಅವರದ್ದು. ಅವರ ಮನೆಗೆ ಹೋಗುವುದು ನನಗೂ ಖುಷಿ ಆಗುತ್ತಿತ್ತು. ಅವರ ಕಾರ್ಯಕ್ರಮಕ್ಕೆ ನಾವಿಬ್ಬರು ಅನೇಕ ಬಾರಿ ಹೋಗಿದ್ದೆವು. ಆ ವ್ಯಕ್ತಿಯ ಜೊತೆ ನಿವೇದಿತಾ ಗೌಡ ಅವರ ಹೆಸರು ಸೇರಿಸುವಂತಹ ವಿಕೃತ ಮನಸ್ಥಿತಿ ನಮ್ಮ ಕನ್ನಡಿಗರಾದ್ದಾಗಿರಬಾರದು ಎಂದು ಚಂದನ್ ಶೆಟ್ಟಿ ಸ್ಪಷ್ಟನೆ ನೀಡಿದರು.
ನಾನು ಕೊಟ್ಟಿಲ್ಲ. ಮಗು ಪಡೆಯುವ ವಿಚಾರದಲ್ಲಿ ನಾನು ನಿವೇದಿತಾಗೆ ಒತ್ತಾಯ ಮಾಡಿದ್ದೇನೆ ಎಂಬ ವದಂತಿ ಕೂಡ ಹಬ್ಬಿದೆ. ಅದು ಸಹ ನಿಜವಲ್ಲ. ಸಂಪೂರ್ಣ ಸುಳ್ಳು. ನಾನು ಒತ್ತಾಯ ಮಾಡಿಲ್ಲ. ಮಕ್ಕಳ ವಿಚಾರದಲ್ಲಿ ನಿವೇದಿತಾ ಕೂಡ ನಿರಾಕರಿಸಿಲ್ಲ’ ನಿವೇದಿತಾ ನನ್ನ ಕಡೆಯಿಂದ ಜೀವನಾಂಶ ಕೇಳಿಲ್ಲ ಎಂದು ಚಂದನ್ ಶೆಟ್ಟಿ ಅವರು ಚಂದನ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
Modi 3.0: ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್ ಜೋಶಿ!