ಸಮಗ್ರ ಮಾಹಿತಿಯೊಂದಿಗೆ ಬನ್ನಿ

ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಜೂನ್ 21ರಂದು ಮಾಡಲಿರುವ ಗ್ರಾಮ ವಾಸ್ತವ್ಯದ ಅಂಗವಾಗಿ ಜಿಲ್ಲೆಯ ಎಲ್ಲ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಂಡಿರುವ ಜನತಾ ದರ್ಶನದಲ್ಲಿ ಜಿಲ್ಲೆಯ ಎಲ್ಲ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆಗಳ ಸಮಗ್ರ ಮಾಹಿತಿಯೊಂದಿಗೆ ಹಾಜರಿರಬೇಕು. ಸಕರ್ಾರಿ ಸವಲತ್ತುಗಳು ಹಾಗೂ ಇತರೆ ಸೌಲಭ್ಯಗಳಿಗಾಗಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಂದ ಬಂದಿರುವ ಅಜರ್ಿಗಳು, ವಿಲೇವಾರಿ ಬಗ್ಗೆ ವರದಿ ಸಿದ್ಧಪಡಿಸಿಕೊಂಡಿರಬೇಕು.

ಒಂದು ವೇಳೆ ಅಜರ್ಿ ವಿಲೇವಾರಿ ಮಾಡದಿದ್ದಲ್ಲಿ ಅದಕ್ಕೆ ಸಕಾರಣ ಹೊಂದಿರಬೇಕು. ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಶಿಷ್ಠಾಚಾರ ಪಾಲನೆ ಹಾಗೂ ಕಾರ್ಯಕ್ರಮ ಯಶಸ್ವಿಗೆ ರಚಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಿತಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮನ್ವಯತೆಯಿಂದ ನಿರ್ವಹಿಸಬೇಕು ಎಂದು ಅವರು ಆದೇಶಿಸಿದರು.

ಮುಖ್ಯಮಂತ್ರಿಗಳು ಚಂಡರಕಿ ಗ್ರಾಮಕ್ಕೆ ಬಂದಾಗ ವಾದ್ಯಮೇಳ ಹಾಗೂ ಕುಂಭ ಹೊತ್ತ ಮಹಿಳೆಯರೊಂದಿಗೆ ಸ್ವಾಗತಿಸಬೇಕು. ನಂತರ ಜನತಾದರ್ಶನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗುವುದು. ಅಲ್ಲದೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಸನ್ಮಾನಿಸಲು, ಬೆಳೆ ಸಾಲ ಪಡೆದ ರೈತರಿಗೆ ಋಣಮುಕ್ತ ಪತ್ರ ವಿತರಿಸಲು, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲು ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಜನತಾದರ್ಶನಕ್ಕೆ ಆಗಮಿಸುವ ಜನರಿಗೆ ಮುಖ್ಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಹಾಗಾಗಿ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸರತಿ ಸಾಲಿನಲ್ಲಿ ನಿಲ್ಲುವ ಸಾರ್ವಜನಿಕರಿಗಾಗಿ ಪಾಕೇಟ್ ನೀರು ಕೊಡಬೇಕು. ವಾಹನಗಳ ನಿಲುಗಡೆ ಸ್ಥಳ, ಊಟದ ಸ್ಥಳ, ಅಡುಗೆ ಸ್ಥಳ, ಜನಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕುಳಿತುಕೊಳ್ಳುವ ಸ್ಥಳಗಳಲ್ಲಿ ನೀರಿನ ಕ್ಯಾನ್ಗಳನ್ನು ಇಟ್ಟು, ಪೇಪರ್ ಗ್ಲಾಸ್ಗಳಲ್ಲಿ ವಿತರಿಸಬೇಕು. ಇವುಗಳಲ್ಲದೇ, ಅವಶ್ಯವಿರುವ ಕಡೆ ನೀರಿನ ವ್ಯವಸ್ಥೆ ಮಾಡಲು ಸ್ಥಳ ಗುರುತಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿವರ್ಾಹಕ ಇಂಜಿನಿಯರ್ ರಾಜ್ಕುಮಾರ್ ಪತ್ತಾರಗೆ ಸೂಚಿಸಿದರು.

ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಲಘು ಉಪಾಹಾರ, ಊಟ, ಕಾಫಿ, ಟೀ ವ್ಯವಸ್ಥೆ ಕೂಡ ಅಚ್ಚುಕಟ್ಟಾಗಿ ಮಾಡಬೇಕು. ಅಂದಿನ ಕಾರ್ಯಕ್ರಮದಲ್ಲಿ ತಾಯಂದಿರು ಕರೆದುಕೊಂಡು ಬರುವ ಚಿಕ್ಕ ಮಕ್ಕಳು ಹಾಗೂ ವಿದ್ಯಾಥರ್ಿಗಳಿಗೆ ಹಾಲು ವಿತರಣೆಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಆಹಾರ ಪೂರೈಸುವ ಮುನ್ನ ಅದರ ಗುಣಮಟ್ಟವನ್ನು ಪರೀಕ್ಷಿಸುವಂತೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಂಜೆ 6 ಗಂಟೆಯ ನಂತರ ಸ್ಥಳೀಯ ವಿದ್ಯಾರ್ಥಿಗಳು- ಕಲಾವಿದರ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು. ಇದಕ್ಕಾಗಿ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನುರಿತ ವಿದ್ಯಾಥರ್ಿಗಳು ಮತ್ತು ಕಲಾವಿದರನ್ನು ಗುರುತಿಸಿ, ಪೂರ್ವಭ್ಯಾಸ ಮಾಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಮುಖ್ಯಮಂತ್ರಿಯವರು ವಿದ್ಯಾರ್ಥಿಗಳೊಂದಿಗೆ ಭೋಜನ ಮಾಡಲು ವ್ಯವಸ್ಥೆ ಮಾಡಬೇಕು ಎಂದರು.

ಜಿಪಂ ಸಿಇಒ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಜನತಾದರ್ಶನ ಕಾರ್ಯಕ್ರಮದಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಸ್ವಯಂ ಸೇವಕರು, ಸ್ವಚ್ಛತಾ ಸಿಬ್ಬಂದಿ ಹಾಗೂ ಸಕರ್ಾರಿ ಕಚೇರಿಗಳ ಸಿಬ್ಬಂದಿಗಳಿಗೆ ಟೀ ಶಟರ್್ ಮತ್ತು ಗುರುತಿನ ಚೀಟಿಗಳನ್ನು ವಿತರಿಸಲಾಗುವುದು. ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡಬೇಕು. ಸಣ್ಣಪುಟ್ಟ ಕೆಲಸಕ್ಕೂ ಮೇಲಧಿಕಾರಿಗಳಿಂದ ಸೂಚನೆ ಬರಲಿ ಎಂಬುದಾಗಿ ಕಾಯಬಾರದು ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಪಂ ಉಪ ಕಾರ್ಯದಶರ್ಿ ಡಾ.ವಿ.ಮುನಿರಾಜು, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಂಟಿ ಕೃಷಿ ನಿದರ್ೇಶಕಿ ಆರ್.ದೇವಿಕಾ ಇದ್ದರು.

Leave a Reply

Your email address will not be published. Required fields are marked *