More

    ಚಂಡೀಗಢ ಮೇಯರ್‌ ಚುನಾವಣೆ ವಿವಾದ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ..! ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    ನವದೆಹಲಿ: ಚಂಡೀಗಢದ ವಿವಾದಾತ್ಮಕ ಮೇಯರ್ ಚುನಾವಣೆ ಕುರಿತಂತೆ ಸೋಮವಾರ ಸುಪ್ರೀಂ ಕೋರ್ಟಿಗೆ ಹಾಜರಾದ ಚುನಾವಣಾಧಿಕಾರಿ ಅನಿಲ್ ಮಸೀಹ್, ತಾನು ಮತಪತ್ರಗಳನ್ನು ತಿರುಚಿರುವುದನ್ನು ಒಪ್ಪಿಕೊಂಡಿದ್ದಾರೆ.

    ಇದನ್ನೂ ಓದಿ:500-501ರ ನಡುವೆ ಅದೆಷ್ಟೋ ನಡೆಯಿತು.. ರವಿಚಂದ್ರನ್ ಅಶ್ವಿನ್ ಪತ್ನಿ ಹೀಗೆ ಹೇಳಿದ್ದರ ಹಿಂದಿನ ಮರ್ಮವೇನು?

    ಇದರ ಬಳಿಕ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

    ಮರುಚುನಾವಣೆ ನಡೆಸುವ ಬದಲು ರಿಟರ್ನಿಂಗ್ ಅಧಿಕಾರಿ ಮಾಡಿದ ಗುರುತುಗಳನ್ನು ಗಣನೆಗೆ ತೆಗೆದುಕೊಳ್ಳದೆ ಮತಪತ್ರಗಳನ್ನು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಮಂಗಳವಾರ(ಫೆ.20) ಮತಪತ್ರಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆಯೂ ಕೋರ್ಟ್ ಆದೇಶಿಸಿದೆ. ನಡೆಯುತ್ತಿರುವ ಕುದುರೆ ವ್ಯಾಪಾರದ ಕುರಿತೂ ನ್ಯಾಯಾಲಯ ತನ್ನ ಕಳವಳ ವ್ಯಕ್ತಪಡಿಸಿದೆ. ಲಭ್ಯ ಮತಪತ್ರಗಳ ಕೂಲಂಕುಷ ಪರಿಶೀಲನೆ ನಡೆಸಬೇಕೆಂದು ಹೇಳಿದೆ.

    ಭಾರೀ ವಿವಾದ ಸೃಷ್ಟಿಸಿದ್ದ ಚಂಡೀಗಢ ಮೇಯ‌ರ್ ಚುನಾವಣೆಯಲ್ಲಿ ಎಂಟು ಮತಪತ್ರಗಳನ್ನು ಅಧಿಕಾರಿ ಅಸಿಂಧು ಎಂದು ಘೋಷಿಸಿದ ಪರಿಣಾಮ ಸ್ಪಷ್ಟ ಬಹುಮತವಿರುವ ಹೊರತಾಗಿಯೂ ಆಪ್ ಅಭ್ಯರ್ಥಿ ಸೋಲುಂಡು ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಗಿತ್ತು.
    ಕಳೆದ ತಿಂಗಳು ನಡೆದಿದ್ದ ಮೇಯರ್ ಚುನಾವಣೆ ಎಎಪಿ ಮತ್ತು ಬಿಜೆಪಿ ನಡುವಿನ ಕಟುವಾದ ರಾಜಕೀಯ-ಕಾನೂನು ಹೋರಾಟದ ಕೇಂದ್ರವಾಗಿದೆ.
    ಆಮ್ ಆದ್ಮಿ ಪಕ್ಷದ ಕೌನ್ಸಿಲರ್‌ಗಳ ಎಂಟು ಮತಗಳು ಸ್ಪಷ್ಟ ಕಾರಣವಿಲ್ಲದೆ “ಅಸಿಂಧು” ಎಂದು ಘೋಷಿಸಲ್ಪಟ್ಟ ನಂತರ ಭಾರತೀಯ ಜನತಾ ಪಕ್ಷದ ಮನೋಜ್ ಸೋಂಕರ್ ನಾಲ್ಕು ಮತಗಳ ಅಂತರದಿಂದ ಮೇಯರ್ ಆಗಿ ಆಯ್ಕೆಯಾಗಿದ್ದರು.

    ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಕುರಿತು​ ಗುಡ್ ನ್ಯೂಸ್! ಫೆ.17ರ ಅವಧಿ ವಿಸ್ತರಣೆ.. ವಿವರ ಇಲ್ಲಿದೆ ನೋಡಿ..

    r

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts