More

    ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸೇರಲು ಟಿಡಿಪಿ-ಜನಸೇನಾ ಸಜ್ಜು?

    ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಎಲೆಕ್ಷನ್‌ಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ಆಂಧ್ರ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಚಂದ್ರಬಾಬು ನಾಯ್ಡು ಅವರು ಆರು ವರ್ಷಗಳ ನಂತರ ಮತ್ತೆ ಎನ್​ಡಿಎಗೆ ಮರಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    ಇದನ್ನೂ ಓದಿ:  ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾರ್ಲಿಂಗ್‌ ಕೃಷ್ಣ-ಮಿಲನಾ ನಾಗರಾಜ್​!

    ನಾಯ್ಡು ಗುರುವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

    ತಮ್ಮ ವಿರುದ್ಧದ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಆಂಧ್ರ ಪ್ರದೇಶವನ್ನು ಮುಗಿಸಲು ಸಂಚು ರೂಪಿಸಿದೆ ಎಂದು ಟೀಕಿಸಿದ್ದ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಇದೀಗ ಮತ್ತೆ ಎನ್​ಡಿಎ ಮೈತ್ರಿಕೂಟ ಸೇರಲು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

    ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.
    ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಭಾಗಹಿಸಿದ್ದರು. ಮಾತುಕತೆ ನಂತರ ಟಿಡಿಪಿ ಎನ್​ಡಿಎ ಸೇರಲು ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸೀಟು ಹಂಚಿಕೆ ಹಂಚಿಕೆ ಕುರಿತು ಮತ್ತೊಂದು ಸುತ್ತು ಮಾತುಕತೆ ನಡೆಸಲು ತೀರ್ಮಾನಿಸಲಾಗಿದೆ.

    ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸೇರಲು ಟಿಡಿಪಿ-ಜನಸೇನಾ ಸಜ್ಜು?

    ಶುಕ್ರವಾರ ಕೂಡ ನಾಯ್ಡು ಮತ್ತು ಶಾ ಭೇಟಿಯಾಗುವ ಸಾಧ್ಯತೆಯಿದೆ. ಸಭೆಯಲ್ಲಿ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಕೂಡ ಉಪಸ್ಥಿತರಿರುವ ಸಾಧ್ಯತೆ ಇದೆ. ಶುಕ್ರವಾರ ನಾಯಕರ ಸಭೆಯು ಟಿಡಿಪಿ-ಬಿಜೆಪಿ-ಜನಸೇನೆ ನಡುವಿನ ಸೀಟು ಹಂಚಿಕೆ ಕುರಿತು ಮಹತ್ವದ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.

    ಟಿಡಿಪಿ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿತ್ತು. ಆದರೆ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಮೈತ್ರಿಕೂಟದಿಂದ ಹೊರ ನಡೆದಿತ್ತು.ಏತನ್ಮಧ್ಯೆ, ಎನ್‌ಡಿಎ ಸದಸ್ಯರಾಗಿರುವ ಪವನ್​ ಕಲ್ಯಾಣ್‌ನ ಜನಸೇನೆ ಈಗಾಗಲೇ ಟಿಡಿಪಿಯೊಂದಿಗೆ ಕೈಜೋಡಿಸಿದೆ ಮತ್ತು ಬಿಜೆಪಿಯನ್ನು ಅನುಸರಿಸಲು ಒತ್ತಾಯಿಸುತ್ತಿದೆ.

    ಚಂದ್ರಬಾಬು ನಾಯ್ಡು ಅವರು ಈ ವರ್ಷದ ಫೆಬ್ರವರಿಯಲ್ಲಿ ಅಮಿತ್​ ಶಾ ಮತ್ತು ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು, ಇದೀಗ ಮತ್ತೆ ಮತ್ತೆ ಕಮಲ ನಾಯಕರನ್ನು ಭೇಟಿ ಮಾಡಿರುವುದು ಎನ್​ಡಿಎ ಮೈತ್ರಿಕೂಟದೊಂದಿಗೆ ಮೈತ್ರಿಯಾಗುವುದು ಖಚಿತ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

    2024ರ ಲೋಕ ಸಮರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಪಟ್ಟದಲ್ಲಿ ಕೂರಿಸಲು ರಾಜಕೀಯ ಲೆಕ್ಕಾಚಾರ ಶುರುವಾಗಿದೆ. ಈ ಹಿನ್ನೆಲೆ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂದರೆ ದೇಶದುದ್ದಕ್ಕೂ ಬಿಜೆಪಿ ತನ್ನದೇ ಆದ ಚುನಾವಣಾ ತಂತ್ರಗಳನ್ನು ಹೆಣೆಯಬೇಕು.

    ನೀರಿನ ಬಿಕ್ಕಟ್ಟು​: ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕುಡಿಯಲು ನೀರು ಕೊಡಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts