More

    ಚಂದ್ರಬಾಬು ನಾಯ್ಡುಗೆ ಸದ್ಯಕ್ಕಿಲ್ಲ ರಿಲೀಫ್; ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿದ ಕೋರ್ಟ್

    ಅಮರಾವತಿ: ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್​ 19ರವರೆಗೆ ವಿಸ್ತರಿಸಲಾಗಿದೆ.

    ಗುರುವಾರ (ಅಕ್ಟೋಬರ್ 05)ಕ್ಕೆ ಅವರ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡ ಬಳಿಕ ಅವರ ಬಂಧನದ ಅವಧಿಯನ್ನು ಸ್ಥಳೀಯ ಎಸಿಬಿ ನ್ಯಾಯಾಲಯವು ಮೂರನೇ ಬಾರಿಗೆ ವಿಸ್ತರಿಸಿದೆ.

    ನಾಯ್ಡು ಅವರ ಜಾಮೀನು ಅರ್ಜಿ ಹಾಗೂ ಆಂಧ್ರಪ್ರದೇಶ ಸಿಐಡಿ ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ. ಸಿಐಡಿ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪಿ ಸುಧಾಕರ್ ರೆಡ್ಡಿ ಪ್ರತಿನಿಧಿಸಿದ್ದಾರೆ. ಸುಪ್ರೀಂ ಕೋರ್ಟ್ ವಕೀಲ ಪ್ರಮೋದ್ ದುಬೆ ಚಂದ್ರಬಾಬು ನಾಯ್ಡು ಪರ ವಾದ ಮಂಡಿಸಿದ್ದಾರೆ.

    ಇದನ್ನೂ ಓದಿ: ಮಣಿಪುರದಲ್ಲಿ ಮತ್ತೊಮ್ಮೆ ಭುಗಿಲೆದ್ದ ಹಿಂಸಾಚಾರ; ಮನೆಗಳಿಗೆ ಬೆಂಕಿ ಹಚ್ಚಿ ಗುಂಡು ಹಾರಿಸಿದ ದುಷ್ಕರ್ಮಿಗಳು

    ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23-24ರಂದು ನಡೆದ ಕಸ್ಟಡಿಯಲ್ ವಿಚಾರಣೆಯಲ್ಲಿ ಚಂದ್ರಬಾಬು ನಾಯ್ಡು ಅವರು ತನಿಖಾಧಿಕಾರಿಗಳಿಗೆ ಸಹಕರಿಸದ ಕಾರಣ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ನಿಡುವಂತೆ ಸಿಐಡಿ ನ್ಯಾಯಾಲಯಕ್ಕೆ ಕೋರಿದೆ.

    ಕೌಶಲ್ಯಾಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಸಿಐಡಿ ಸೆಪ್ಟೆಂಬರ್​ 9ರಂದು ವಶಕ್ಕೆ ಪಡೆದಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts