ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು: ಚಂದ್ರಯಾನ-3ರ ಯಶಸ್ಸಿಗೆ ಮೆಚ್ಚಿ ಧನ್ಯವಾದ ತಿಳಿಸಿದ ಪ್ರಕಾಶ್ ರಾಜ್​

Prakash Raj (3)
Published on

ಬೆಂಗಳೂರು: ಚಂದ್ರನಿಂದ ಬಂದ ಮೊದಲ ಚಿತ್ರ ಎಂದು ವಿರೂಪಗೊಳಿಸಿದ ಚಾಯ್​ವಾಲ್ ಚಿತ್ರವನ್ನು ಹಂಚಿಕೊಂಡು ತಮಾಷೆ ಮಾಡಿ ವಿವಾದಕ್ಕೀಡಾಗಿದ್ದ ನಟ ಪ್ರಕಾಶ್ ರಾಜ್, ಇದೀಗ ಚಂದ್ರಯಾನ-3 ಯಶಸ್ಸಿಗೆ ಮೆಚ್ಚಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

'ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. 🙏🏿🙏🏿🙏🏿 ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು....ಸಂಭ್ರಮಿಸಲು .. ಇದು ದಾರಿಯಾಗಲಿ' ಎಂದು ಪ್ರಕಾಶ್ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಹಾರೈಸಿದ್ದಾರೆ.

ಚಂದ್ರಯಾನ-3ರ ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್ ಕನ್ನಡ ಹಾಗೂ ಇಂಗ್ಲಿಷ್ ಎರಡರಲ್ಲೂ ಸಂತೋಷ ಹಂಚಿಕೊಂಡಿದ್ದಾರೆ. ಆದರೆ ಅವರ ಹಿಂದಿನ ಎರಡು 'ಎಕ್ಸ್'​ಗಳಿಂದ ಬೇಸರಗೊಂಡಿದ್ದ ಹಲವರು, ಈಗ ಚಂದ್ರಯಾನ-3ರ ಯಶಸ್ಸಿನ ಬಳಿಕ ಸಂತೋಷ ಹಂಚಿಕೊಂಡು ಧನ್ಯವಾದ ಹೇಳಿದ್ದರೂ ಟ್ರೋಲ್ ಮಾಡುವುದನ್ನು ನಿಲ್ಲಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net