

ಮೈಸೂರು: ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಅರ್ಚಕರ ಸಂಘದ ವತಿಯಿಂದ ಇರ್ವಿನ್ ರಸ್ತೆಯ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ವಿಕ್ರಂ ಲ್ಯಾಂಡರ್ ಯಶಸ್ಸಿಗೆ ಸರ್ವಸಿದ್ಧ ಯಾಗ ನಡೆಸಲಾಯಿತು.
ಪ್ರಧಾನ ಅರ್ಚಕ ವಿದ್ವಾನ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಯಾಗ ನೆರವೇರಿಸಲಾಯಿತು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಚಂದ್ರಯಾನ-3ರ ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಇಳಿಯಲಿ ಈ ಯೋಜನೆಯ ಇತಿಹಾಸ ನಿರ್ಮಿಸಲಿ ರಾಷ್ಟ್ರದ ಹೆಸರು ಪ್ರಪಂಚದಲ್ಲಿ ಅಗ್ರಗಣ್ಯವಾಗಲಿ ಎಂದು ಆಶಿಸಿದರು.
ಈ ಸಂದರ್ಭ ಅರ್ಚಕರ ಸಂಘದ ಅಧ್ಯಕ್ಷ ವಿದ್ವಂತ್ ಕೃಷ್ಣಮೂರ್ತಿ, ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ವಿವಿಧ ಸಂಘಟನೆಗಳ ಪ್ರಮುಖರಾದ ಅಜಯ್ ಶಾಸ್ತ್ರಿ, ಸುಚಿಂದ್ರ,ಅಪೂರ್ವ ಸುರೇಶ್ ,ಎಸ್.ಎನ್. ರಾಜೇಶ್, ಆನಂದ್, ರಾಕೇಶ್ ಹಾಗೂ ಇತರರು ಇದ್ದರು.