More

    ಪರೀಕ್ಷೆ ಬದಲಾವಣೆಯಿಂದ ಮಕ್ಕಳಿಗೆ ತೊಂದರೆ

    ಸಾಗರ: ಐದು, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ದಿನಕ್ಕೊಂದು ಬದಲಾವಣೆ ಮಾಡುತ್ತಿರುವ ಕ್ರಮ ಖಂಡಿಸಿ ಬುಧವಾರ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
    ಇತ್ತೀಚೆಗೆ ರಾಜ್ಯ ಸರ್ಕಾರ ಶಿಕ್ಷಣದಲ್ಲಿ ಹೊಸ ಪ್ರಯೋಗ ಮಾಡಿ ತನ್ನ ಮೂಗಿನ ನೇರಕ್ಕೆ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸುವ ಪ್ರಯತ್ನ ನಡೆಸುತ್ತಿದೆ. ಹೊಸ ಶಿಕ್ಷಣ ನೀತಿಯಿಂದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಪದ್ಧತಿ ಜಾರಿಗೆ ತಂದಿದೆ. ಆದರೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರದ ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗುವಂತಾಗಿದೆ ಎಂದು ದೂರಿದರು.
    ಶಿಕ್ಷಣ ಕ್ಷೇತ್ರದಲ್ಲಿ ದಿನಕ್ಕೊಂದು ಬದಲಾವಣೆ ಮಾಡುವುದರಿಂದ ಶೈಕ್ಷಣಿಕ ವ್ಯವಸ್ಥೆಗೆ ಒಗ್ಗಿಕೊಂಡಿರುವ ವಿದ್ಯಾರ್ಥಿಗಳು ಸಹಜವಾಗಿ ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಕಷ್ಟಪಡಬೇಕಾಗುತ್ತದೆ. ಪಾಲಕರೂ ಮಕ್ಕಳ ಒತ್ತಡದಿಂದ ಮಾನಸಿಕವಾಗಿ ನೊಂದುಕೊಳ್ಳುವಂತೆ ಆಗುತ್ತಿದೆ. ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುವ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸದಂತೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದರು.

    ಯುವ ಮೋರ್ಚಾ ಅಧ್ಯಕ್ಷ ಪರಶುರಾಮ್, ಪ್ರಮುಖರಾದ ದೇವೇಂದ್ರಪ್ಪ, ಗಣೇಶಪ್ರಸಾದ್, ಕೆ.ಎಸ್.ಪ್ರಶಾಂತ್, ಶ್ರೀರಾಮ್, ಮಹೇಶ್, ರಂಜಿತಾ, ಜಗನ್ನಾಥ್ ಶೇಟ್, ವಿನಯ್, ಸಂತೋಷ್, ಪ್ರವೀಣ್, ಕಾರ್ತಿಕ್, ಸುಜಯ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts