More

    ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರ್‍ಯಾಲಿ; ಸಂಚಾರ ಮಾರ್ಗದಲ್ಲಿ ಬದಲಾವಣೆ

    ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮೊದಲ ಹಂತದ ಮತದಾನ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಏಪ್ರಿಲ್ 20) ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನಲ್ಲಿ ಬೃಹತ್​ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಅರಮನೆ ಮೈದಾನದಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆಯಲ್ಲಿ ಅರಮನೆ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, 2,000ಕ್ಕೂ ಅಧಿಕ ಪೊಲೀಸ್​​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

    ಇದನ್ನೂ ಓದಿ: ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ​; ​ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದ ಗೃಹ ಸಚಿವರು

    ಅರಮನೆ ಮೈದಾನದಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದ್ದು, ಹಲವು ಕಡೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಅದರಂತೆ ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಲಿದೆ.

    ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ಪರ್‍ಯಾಯ ಮಾರ್ಗ್ ಬದಲಿಸುವಂತೆ ಸೂಚಿಸಿದ್ದು, ಅದರಂತೆ ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts