More

    ಆಟೋ, ಟ್ಯಾಕ್ಸಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

    ಬೆಂಗಳೂರು: ಆಟೋ ಮತ್ತು ಟ್ಯಾಕ್ಸಿಗಳ ಮೇಲಿನ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಗಳ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಗುತ್ತಿದೆ.
    ಆಟೋ ಮತ್ತು ಟ್ಯಾಕ್ಸಿ ಚಾಲಕರು, ಸಂಟನೆ ಸದಸ್ಯರು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೂ ಮುಷ್ಕರ ನಡೆಸಲಿದ್ದಾರೆ. ಅದರ ಜತೆಗೆ ಬೆಳಗ್ಗೆ 10.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಎದುರಿನಿಂದ ಸ್ವಾತಂತ್ರ ಉದ್ಯಾನದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ. ಮುಷ್ಕರದಲ್ಲಿ 12 ಆಟೋ ಹಾಗೂ 13 ಟ್ಯಾಕ್ಸಿ ಚಾಲಕರ ಸಂಟನೆಗಳು ಭಾಗಿಯಾಗಲಿದ್ದು, ನಗರದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಆಟೋ ಹಾಗೂ ಟ್ಯಾಕ್ಸಿ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
    ಕರೊನಾ ಸೋಂಕಿನ ಕಾರಣದಿಂದಾಗಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಆದಾಯವಿಲ್ಲದಂತಾಗಿದೆ. ಹೀಗಾಗಿ ಅವರ ಪುನಶ್ಚೇತನಕ್ಕಾಗಿ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆಯಡಿ ಆಟೋ ಚಾಲಕರಿಗೆ 1 ಲಕ್ಷ ರೂ. ಹಾಗೂ ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ರೂ. ಸಾಲ ನೀಡಬೇಕು. ಅಸಂಟಿತ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅನುದಾನ ನೀಡಬೇಕು. ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಬಿಡಿಎ ಅಥವಾ ಗೃಹ ಮಂಡಳಿಯಿಂದ ಮನೆಗಳನ್ನು ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟಿಸಲಾಗುತ್ತಿದೆ ಎಂದು ಐಕ್ಯ ಹೋರಾಟ ಸಮಿತಿ ಅಧ್ಯಕ್ಷ ಮಂಜುನಾಥ ತಿಳಿಸಿದ್ದಾರೆ.
    ಅದರ ಜತೆಗೆ ಹೊಸ ಆಟೋ ತೆರಿಗೆಯನ್ನು ಶೇ. 17ರಿಂದ ಐದಕ್ಕಿಳಿಸಬೇಕು. ನಕಲಿ ಆಟೋ ಪಮಿರ್ಟ್​ಗೆ ಆಧಾರ್​ಗೆ ಲಿಂಕ್​ ಹಾಗೂ ಮಾಲೀಕನೇ ಖುದ್ದು ಹಾಜರಾಗಿ ಹೆಬ್ಬೆಟ್ಟು ಗುರುತು ನೀಡುವುದನ್ನು ಕಡ್ಡಾಯಗೊಳಿಸಬೇಕು. ಲಾಕ್​ಡೌನ್​ ಸಂದರ್ಭದಲ್ಲಿ ಕರೊನಾ ಸೋಂಕಿನಿಂದ ಮೃತರಾದ ಚಾಲಕರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಓಲಾ, ಉಬರ್​ ಮಾದರಿಯಲ್ಲಿ ಸರ್ಕಾರದಿಂದಲೇ ಆ್ಯಪ್​ ಅಭಿವೃದ್ಧಿಪಡಿಸಿ ಸಂಸ್ಥೆ ಸ್ಥಾಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಪ್ರತಿಭಟನೆ ವೇಳೆ ಸರ್ಕಾರದ ಮುಂದಿಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts