More

    ಹೆಚ್ಚುವರಿ ಅನುದಾನದಿಂದ ಕಾಮಗಾರಿ ವೈಜ್ಞಾನಿಕವಾಗುತ್ತದೆಯೇ..?

    ಚನ್ನಗಿರಿ: ಸಾಸ್ವೆಹಳ್ಳಿ ಏತ ನೀರಾವರಿ ಕಾಮಗಾರಿ ಅವೈಜ್ಞಾನಿಕವಾದುದು. ಇದಕ್ಕೆ ಹೆಚ್ಚುವರಿಯಾಗಿ 167 ಕೋಟಿ ರೂ. ಅನುದಾನ ತಂದಾಕ್ಷಣವೇ ವೈಜ್ಞಾನಿಕವಾಗಲು ಸಾಧ್ಯವೇ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಪ್ರಶ್ನಿಸಿದರು.

    ಇಲ್ಲಿನ ಜವಳಿ ಸಮುದಾಯ ಭವನದಲ್ಲಿ ಬುಧವಾರ ತಾಲೂಕು ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕಾಂಗ್ರೆಸ್ ಆರೋಗ್ಯ ಹಸ್ತ ತರಬೇತಿ ಕಾರ್ಯಕ್ರಮದಲ್ಲಿ ಕರೊನಾ ಸೇನಾನಿಗಳಿಗೆ ಆರೋಗ್ಯ ಕಿಟ್ ವಿತರಿಸಿ ಮಾತನಾಡಿದರು.

    ಹಾಲಿ ಶಾಸಕರು ನಾನು ಶಾಸಕನಾಗಿದ್ದಾಗ 0ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಅವೈಜ್ಞಾನಿಕ ಎಂದು ಬಿಂಬಿಸುತ್ತಿದ್ದಾರೆ. ನಾನು ಈಗಲೇ ಹೇಳುತ್ತೇನೆ. ಅವರು ತಮ್ಮ ಅಧಿಕಾರವಧಿ ಮುಗಿಯುವುದರೊಳಗೆ ಕಾಮಗಾರಿ ಮುಗಿಸಿ ತಾಲೂಕಿನ ಕೆರೆಗಳಿಗೆ ನೀರು ಹರಿಸಿದರೆ ನಾನೇ ಅವರನ್ನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸವಾಲು ಹಾಕಿದರು.

    ಕೇಂದ್ರದ ಸರ್ಕಾರ ಎಪಿಎಂಸಿ ಹಾಗೂ ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸುವ ಮೂಲಕ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇವು ಬಂಡವಾಳ ಶಾಹಿಗಳಿಗೆ ಅನುಕೂಲವಾಗುವ ಕಾಯ್ದೆಯಾಗಿವೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಭೂ ಸುಧಾರಣೆ ಕಾಯ್ದೆ ಮಾರಕವಾಗಿದೆ ಎಂದು ದೂರಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿವೆ. ಯಡಿಯೂರಪ್ಪ ಅವರಿಗೆ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ, ನೌಕರರಿಗೆ ವೇತನ ನೀಡಲಾಗದೆ ಒದ್ದಾಡುತ್ತಿದ್ದಾರೆ. ಈ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದನ್ನು ಕೂಡಲೇ ವಜಾ ಮಾಡಬೇಕು. ಕೇಂದ್ರ ಸರ್ಕಾರ ಜಿಎಸ್‌ಟಿ ತೆರಿಗೆ ಪಡೆದು ರಾಜ್ಯಕ್ಕೆ ಪ್ರತಿವರ್ಷ ಅನುದಾನ ನೀಡುವುದಾಗಿ ಒಪ್ಪಂದ ಮಾಡಿಕೊಂಡು ಯಾವುದೇ ಹಣ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

    ಕರೊನಾ ಬಗ್ಗೆ ಭಯ ಬೇಡ ಎಚ್ಚರವಿರಲಿ. ಇದರೊಂದಿಗಿನ ಬದುಕು ಅನಿವಾರ್ಯವಾಗಿದೆ. ವೈರಸ್ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸೋಲು ಕಂಡಿದೆ ಎಂದು ದೂರಿದರು.

    ಡಿ.ಕೆ. ಶಿವಕುಮಾರ್, ರಾಜ್ಯದ ಜನರ ಹಿತ ಕಾಯುವುದಕ್ಕಾಗಿ ಪ್ರತಿ ಗ್ರಾಪಂಗೆ ಇಬ್ಬರು ಕರೊನಾ ನೇನಾನಿಗಳನ್ನು ಪಕ್ಷದಿಂದ ನಿಯೋಜಿಸಿ ಜನರ ಆರೋಗ್ಯ ತಪಾಸಣೆ ಜವಾಬ್ದಾರಿ ವಹಿಸಿದ್ದಾರೆ. ಪರೀಕ್ಷೆ ವೇಳೆ ಪಾಸಿಟಿವ್ ಬಂದವರಿಗೆ ಆರೋಗ್ಯ ಇಲಾಖೆ ಮಾಹಿತಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

    ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ತಾಲೂಕು ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಸಂತೇಬೆನ್ನೂರು ಬ್ಲಾಕ್ ಅಧ್ಯಕ್ಷ ಜಬೀವುಲ್ಲಾ, ತಾಪಂ ಸದಸ್ಯ ಜಗದೀಶ್ ಪಾಂಡೋಮಟ್ಟಿ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಕಂಚಿಗನಾಳು, ಅಮಾನುಲ್ಲಾ, ಕೊರಟಿಕೆರೆ ಉಮೇಶ್, ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts