18 C
Bangalore
Thursday, December 5, 2019

ಕೆರೆ ತುಂಬಿಸುವ ಕೆಲಸ ಆಗಲಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಚನ್ನಗಿರಿ: ಯಾವುದೇ ಸರ್ಕಾರ ಆಡಳಿತ ನಡೆಸಲಿ ರಾಜ್ಯದ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು. ಇದರಿಂದ ರೈತರ ಜೀವನ ಹಸನಾಗಲಿದೆ ಎಂದು ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಪಿಎಲ್‌ಡಿ ಬ್ಯಾಂಕ್ ಅಮೃತ ಮಹೋತ್ಸವ ಮತ್ತು ಭವನ ಉದ್ಘಾಟನೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ರಾಜ್ಯದ ಕೆರೆಗಳ ಹೂಳು ತೆಗೆಸಿ, ಮಳೆ ನೀರು ತುಂಬಿಸಬೇಕು. ಇಲ್ಲವೇ ಕೆರೆಗಳಿಗೆ ನದಿ ನೀರು ಹರಿಸಬೇಕು. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಜನರು ಕಂಗಾಲಾಗಿದ್ದಾರೆ. ಪರಿಸರದ ಸಮತೋಲನ ಕಾಪಾಡದಿರುವುದು ಇದಕ್ಕೆ ಕಾರಣ. ಇಂದು ನಾವೆಲ್ಲರೂ ಪರಿಸರದ ಪಾವಿತ್ರ್ಯತೆ ಉಳಿಸಬೇಕಿದೆ ಎಂದರು.

ನಮ್ಮ ಮಿತಿಯಲ್ಲಿ ಹೆಚ್ಚು ಗಿಡ-ಮರ ಬೆಳಸಬೇಕು ಮತ್ತು ನೀರಿನ ಮಿತಬಳಕೆ ಆಗಬೇಕು. ನೀರನ್ನು ಹೆಚ್ಚಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಪೂರ್ವಜರು ಬದುಕಿಗೆ ಬೇಕಾದ ಬೆಳೆ ಬೆಳೆಯುತ್ತಿದ್ದರು. ಇಂದು ಹಣಕ್ಕಾಗಿ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ. ಜೀವನಾವಶ್ಯ ಬೆಳೆ ಮರೆತಿದ್ದೇವೆ. ಎಲ್ಲರಿಗೂ ಹಣ ಮುಖ್ಯ. ಹಣಕ್ಕಿಂತ ಆರೋಗ್ಯ ಉಳಿಸಿಕೊಳ್ಳಬೇಕಿದೆ. ನೆಲದ ಸತ್ವ ಹೆಚ್ಚಿಸುವ ಬೆಳೆ ಬೆಳೆಯಬೇಕಿದೆ ಎಂದರು.

ಪಿಎಲ್‌ಡಿ ಬ್ಯಾಂಕುಗಳು ನಷ್ಟದಲ್ಲಿದೆ. ನಷ್ಟಕ್ಕೆ ಕಾರಣ ಸಾಲ ಪಡೆದವರು ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡದಿರುವುದು. ಸರ್ಕಾರಗಳು ಸಾಲಮನ್ನಾ ಮಾಡುತ್ತದೆ ಎಂದು ಕಾಯುವ ಬದಲಿಗೆ ಕಾಯಕ ಶ್ರದ್ಧೆಯಿಂದ ಸಾಲ ಕಟ್ಟಬೇಕು. ಆಗ ಮಾತ್ರ ಸಹಕಾರಿ ಕ್ಷೇತ್ರ ಉಳಿಯಲು ಸಾಧ್ಯ. ಬ್ಯಾಂಕುಗಳಲ್ಲಿ ಕೆಲಸ ಮಾಡುವವರು ಸಾಲ ನೀಡುವ ಮೊದಲು ಅವರ ಪ್ರಾಮಾಣಿಕತೆ ಕುರಿತು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

ನಾಡಿನಲ್ಲಿ ಅನೇಕ ಸಮಸ್ಯೆಗಳಿವೆ. ಅದಕ್ಕೆ ಕಾರಣ ನಮ್ಮಲ್ಲಿ ಪ್ರಾಮಾಣಿಕತೆಯ ಕೊರತೆ. ಸ್ವಾರ್ಥ, ಅಧಿಕಾರ ದಾಹದಿಂದ ಹೊರಬಂದರೆ ಮನೆ, ಸಮಾಜ, ದೇಶ ಪ್ರಗತಿ ಸಾಧಿಸಲು ಸಾಧ್ಯ. ಎಲ್ಲರೂ ಸೇರಿ ಸಂಸ್ಥೆಯನ್ನು ಕಟ್ಟುತ್ತಾರೆ. ಆದರೆ ಇದರಲ್ಲಿರುವಂಥ ಕೆಲವರು ಅದನ್ನು ಮುಳುಗಿಸುವ ಕೆಲಸ ಮಾಡುತ್ತಾರೆ ಎಂದು ಬೇಸರಿಸಿದರು.

ಕಟ್ಟಡವನ್ನು ಶಾಸಕ ಮಾಡಾಳು ವಿರೂಪಾಕ್ಷಪ್ಪ, ಸಮಾರಂಭವನ್ನು ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು. ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಮಾಯಕೊಂಡ ಶಾಸಕ ಪ್ರೊ.ಎನ್.ಲಿಂಗಣ್ಣ, ಮಾಜಿ ಶಾಸಕ ಮಹಿಮಾ ಜೆ.ಪಟೇಲ್, ತಾಪಂ ಅಧ್ಯಕ್ಷೆ ರೂಪಾ ಶ್ರೀಧರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಉಮೇಶ್ ಕುಮಾರ್ ಬ್ಯಾಂಕ್ ಉಪಾಧ್ಯಕ್ಷ ವೈ.ಪಿ.ಮಹಾದೇವಪ್ಪ, ನಿರ್ದೇಶಕರಾದ ಜಿ.ಆರ್.ಲೋಕೇಶಪ್ಪ, ಕೆಜಿಡಿ ಸೋಮಶೇಖರ್, ಎಸ್.ಭಾನುಪ್ರಕಾಶ, ಜಿ.ಬಿ.ವಿಜಯಕುಮಾರ್ ಇದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...