ದುಶ್ಚಟದಿಂದ ಕತ್ತಲಿನತ್ತ ಬದುಕು

ಚನ್ನಗಿರಿ: ದುಶ್ಚಟಗಳು ಮನುಷ್ಯರನ್ನು ಹಾಳು ಮಾಡುವ ಜತೆಯಲ್ಲೇ ಕುಟುಂಬವನ್ನು ಸರ್ವನಾಶ ಮಾಡುತ್ತವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಯೋಜನಾಧಿಕಾರಿ ಜಯಂತ್ ಪೂಜಾರಿ ತಿಳಿಸಿದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ನವ ಜೀವನ ಪೋಷಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವ್ಯಸನಿಗಳಿಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದಿಲ್ಲ. ಆದ್ದರಿಂದ ಕಲಿತ ದುಶ್ಚಟ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮಾಜದಲ್ಲಿ ಕುಡಿತದಿಂದ ಅನೇಕ ಸಂಸಾರಗಳು ಹಾಳಾಗುತ್ತಿರುವುದನ್ನು ಹತ್ತಿರದಿಂದ ಕಂಡ ಶ್ರೀ ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕವನ್ನು ಮದ್ಯಮುಕ್ತ ರಾಜ್ಯ ಮಾಡಲು ಸಂಕಲ್ಪ ಮಾಡಿದ್ದಾರೆ ಎಂದರು.