More

    ಶಾಸಕ ವಿರೂಪಾಕ್ಷಪ್ಪ‌​ಗೆ ಜಾಮೀನು | ಚನ್ನಗಿರಿ ಪಟ್ಟಣದಲ್ಲಿ ವಿಜಯೋತ್ಸವ; ಮತ್ತೆ ಮಾಡಾಳ್​ರನ್ನ ಗೆಲ್ಲುಸುತ್ತೇವೆ ಎಂದ ಕಾರ್ಯಕರ್ತರು

    ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ‌ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಿಗೆ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ ಮಾಡಾಳ್​ಗೆ ಜಾಮೀನು ಸಿಕ್ಕ ಹಿನ್ನೆಲೆ ಚನ್ನಗಿರಿ ಪಟ್ಟಣದ ಐಬಿ ಸರ್ಕಲ್​ನಲ್ಲಿ ಕಾರ್ಯಕರ್ತರು, ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.

    ಕಾರ್ಯಕರ್ತರು, ಅಭಿಮಾನಿಗಳು ಜೈ ಮಾಡಾಳ್, ಜೈ ಮಾಡಾಳ್ ಎಂದು ಘೋಷಣೆ ಕೂಗಿದ್ದಾರೆ. ಮತ್ತೆ ಮಾಡಾಳ್​ರನ್ನು ಗೆಲ್ಲುಸುತ್ತೇವೆ ಎಂದು ಘೋಷಣೆ. ಇಂದು ಪ್ರಮುಖ ಸಭೆ ನಡೆಸಿದ್ದ ಮಾಡಾಳ್ ವಿರುಪಾಕ್ಷಪ್ಪ ಅಭಿಮಾನಿಗಳು, ಷ್ಯಡ್ಯಂತ್ರದಿಂದ ಶಾಸಕರನ್ನ ಸಿಲುಕಿಸಲಾಗಿದೆ. ಇದರಲ್ಲಿ ಮಾಡಾಳ್ ಅವರ ತಪ್ಪಿಲ್ಲ ಎಂದ ಹೇಳಿದ್ದಾರೆ.

    ಇದನ್ನೂ ಓದಿ: ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!

    ವಿರೂಪಾಕ್ಷಪ್ಪ ಅವರು ಲಂಚ ಕೇಳಿರುವ ಬಗ್ಗೆ ಯಾವುದೇ ಆಡಿಯೋ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಾಕ್ಷ್ಯ ಒದಗಿಸುವವರೆಗೂ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. 5 ಲಕ್ಷ ರೂ. ಬಾಂಡ್ ಇಬ್ಬರಿಂದ ಶ್ಯೂರಿಟಿ ಪಡೆದು ನ್ಯಾಯಮೂರ್ತಿ ಕೆ. ನಟರಾಜನ್​ ಅವರು ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ, ಆದೇಶ ತಲುಪಿದ 48 ಗಂಟೆ ಒಳಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

    ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಮಾ. 02) ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.

    ಇದನ್ನೂ ಓದಿ: ಎಷ್ಟೇ ಕೇಳಿಕೊಂಡರೂ ಗಂಡ ನನ್ನೊಂದಿಗೆ ಜೀವನ ನಡೆಸುತ್ತಿಲ್ಲ; ಮನನೊಂದು ಪ್ರಾಣ ಬಿಟ್ಟ ಪತ್ನಿ!

    ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಗುರುವಾರ ಸಂಜೆ ಖಾಸಗಿ ಕಚೇರಿಯಲ್ಲಿ 2.42 ಕೋಟಿ ಮತ್ತು ಮಧ್ಯರಾತ್ರಿ ಡಾಲಸ್೯ ಕಾಲನಿಯ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ಸೇರಿ ಒಟ್ಟಾರೆ 8.42 ಕೋಟಿ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಮರು ಸ್ಥಾಪನೆಯಾದ ಮೇಲೆ ಲೋಕಾ ಪೊಲೀಸರು ಭೇಟೆಯಾಡಿರುವ ದೊಡ್ಡ ಮೊತ್ತದ ಪ್ರಕರಣ ಇದಾಗಿದ್ದು, ಈ ಪ್ರಕರಣ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಈ ಪ್ರಕರಣದ ಬಳಿಕ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ನಾಪತ್ತೆಯಾಗಿದ್ದರು. ನಂತರ ಜಾಮೀನಿಗಾಗಿ ತಮ್ಮ ಪರ ವಕೀಲರಿಂದ ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ಮಂಜೂರಾಗಿದ್ದು, ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ.

    ಇದನ್ನೂ ಓದಿ: ದೇವನಹಳ್ಳಿ | ಹೆಂಡತಿಯ ಎರಡೂ ಕೈಗಳನ್ನು ಮಚ್ಚಿನಿಂದ ಕತ್ತರಿಸಿದ ಗಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts