ಬೆಳಗಾವಿ: ಕಿತ್ತೂರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ – ಬಿಜೆಪಿ ಮುಖಂಡರು ಪ್ರತ್ಯೇಕವಾಗಿ ಬಂದು ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಬಾಬಾಸಾಹೇಬ ಪಾಟೀಲ, ಮಹಾಂತೇಶ ಕೌಜಲಗಿ, ಆಸಿಫ್ ಸೇರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಿಗೆ ಪ್ರತಿಮೆಗೆ ಗೌರವ ಸಲ್ಲಿಸಿ ಕೆಳಗಿಳಿದರು.
ನಂತರ ಬಂದ ಸಂಸದ ಜಗದೀಶ ಶೆಟ್ಟರ್, ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ್ ಬೆನಕೆ ಮುಂತಾದವರು ಮಾಲಾರ್ಪಣೆ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಜಗದೀಶ ಶೆಟ್ಟರ್, ಸರ್ಕಾರಿ ಕಾರ್ಯಕ್ರಮ ಕಾಂಗ್ರೆಸ್- ಬಿಜೆಪಿ ಎನ್ನದೇ ಎಲ್ಲರನ್ನೂ ಒಟ್ಟಿಗೆ ಕರೆಯಬೇಕಿತ್ತು. ಆದರೆ, ಕರೆದಿಲ್ಲ. ಸಂಜೆ ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಇರುತ್ತದೆ. ಅವರ ಅನುಕೂಲ ತಕ್ಕಂತೆ ಅವರು, ನಮ್ಮ ಅನಕೂಲಕ್ಕೆ ನಾವು ಮಾಲಾರ್ಪಣೆ ಮಾಡಿದ್ದೇವೆ. ಮಾಲಾರ್ಪಣೆ ವಿಚಾರಕ್ಕೆ ನಾವು ಗೊಂದಲ ಮಾಡುವುದಿಲ್ಲ. ಈ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ನಮ್ಮ ಕಡೆಯಿಂದ ಏನು ಗೌರವ ಕೊಡಬೇಕೋ ಕೊಟ್ಟಿದ್ದೇವೆ ಎಂದು ಪ್ರತಿಕ್ರಿಯಿಸಿದರು.