More

    ಲ್ಯಾಪ್‌ಟಾಪ್‌ಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಚನ್ನರಾಯಪಟ್ಟಣ: ದ್ವಿತೀಯ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿಲ್ಲ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.


    ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ಸಹಯೋಗದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಜಾಥಾ ಕೈಗೊಂಡ ವಿದ್ಯಾರ್ಥಿಗಳು ಪಟ್ಟಣದ ಬಿ.ಎಂ.ರಸ್ತೆ ಮೂಲಕ ಸಾಗಿ ತಾಲೂಕು ಕಚೇರಿ ಆವರಣಕ್ಕೆ ಆಗಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.


    ಕಳೆದ ಸರ್ಕಾರ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಉಪಯೋಗಕ್ಕಾಗಿ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡುವ ಬಗ್ಗೆ ಘೋಷಣೆ ಮಾಡಿತ್ತು, ಸಾಂಕೇತಿಕವಾಗಿ ರಾಜ್ಯದ ಪ್ರತಿ ಕಾಲೇಜಿನ ಎರಡು ವಿದ್ಯಾರ್ಥಿಗಳಿಗೆ ವಿಧಾನಸೌಧದ ಆವರಣದಲ್ಲಿ ವಿತರಣೆ ಮಾಡಿ ಯೋಜನೆಗೆ ಚಾಲನೆ ನೀಡಿ ನಂತರ ಲ್ಯಾಪ್‌ಟಾಪ್ ವಿತರಣೆ ಮಾಡದೆ ಮರೆತಿದೆ ಎಂದು ಆರೋಪಿಸಿದರು.


    ಮುಂದೆ ಸ್ನಾತಕೋತ್ತರ ಪದವಿಗೆ ಇಲ್ಲವೆ ಕೆಲಸಕ್ಕಾಗಿ ಕಂಪ್ಯೂಟರ್ ಜ್ಞಾನ ಹೊಂದಲು ಲ್ಯಾಪ್‌ಟಾಪ್‌ನ ಅವಶ್ಯಕತೆಯಿದ್ದು, ಶೀಘ್ರ ಸರ್ಕಾರ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತಿರಿಸಿ ಉಳಿದ ವಿದ್ಯಾರ್ಥಿಗಳನ್ನು ಯೋಜನೆಯಿಂದ ವಂಚಿಸದೆ ಎಲ್ಲರಿಗೂ ಲ್ಯಾಪ್‌ಟಾಪ್ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.


    ಬಳಿಕ ತಹಶೀಲ್ದಾರ್ ಜೆ.ಬಿ.ಮಾರುತಿಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.
    ಪ್ರತಿಭಟನೆಯಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ರಾಜಾಧ್ಯಕ್ಷ ಹರಿ.ಜೆ.ಗೌಡ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts