ಯೋಗದಿಂದ ಉತ್ತಮ ಆರೋಗ್ಯ ಸಾಧ್ಯ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

 ಚನ್ನರಾಯಪಟ್ಟಣ: ಯೋಗದಿಂದ ಮನಸ್ಸು, ದೇಹವನ್ನು ಸ್ಥಿರವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ತಾಲೂಕಿನ ಚಾಮಡಿಹಳ್ಳಿ ಆಯುರ್ವೇದ ಆಸ್ಪತ್ರೆಯ ಯುನಾನಿ ವೈದ್ಯೆ ಡಾ.ಚಿತ್ರಪಿಯಾ ಸಲಹೆ ನೀಡಿದರು.

ಪಟ್ಟಣದ ಹಜರತ್ ಇರ್ಫಾನ್ ಷಾ ಆಲಿ ಶಾದಿ ಮಹಲ್‌ನಲ್ಲಿ ಜಿಲ್ಲಾ ಆಯುಷ್ ಕಚೇರಿ, ಅಲ್‌ಫತೇ ಮೀಲಾದ್ ಕಮಿಟಿ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಬುಧವಾರ ಏರ್ಪಡಿಸಿದ್ದ ಆಯುಷ್ ಚಿಕಿತ್ಸಾ ಉಚಿತ ಶಿಬಿರದಲ್ಲಿ ಮಾತನಾಡಿದರು

ಸಾವಿರಾರು ವರ್ಷಗಳಿಂದ ಪ್ರಚಲಿತದಲ್ಲಿರುವ ಅಯುರ್ವೇದ ವೈದ್ಯ ಪದ್ಧತಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನ್ನಣೆ ಸಿಗುತ್ತಿಲ್ಲ, ಸರ್ಕಾರವು ಅಯುರ್ವೇದ ವೈದ್ಯ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಚಾರ ಮಾಡುತ್ತಿದ್ದರೂ ಜನರಲ್ಲಿಯೇ ತಾತ್ಸಾರ ಹೆಚ್ಚಾಗಿದೆ ಎಂದರು.

ಯುನಾನಿ ಪದ್ಧತಿಯು ಗ್ರೀಸ್ ದೇಶದಲ್ಲಿ ಹುಟ್ಟಿ, ಮೊಗಲರ ಕಾಲದಲ್ಲಿ ಭಾರತಕ್ಕೆ ಪರಿಚಯವಾಗಿ ಇಂದಿಗೂ ಪ್ರಚಲಿತದಲ್ಲಿದೆ. ಇದರಲ್ಲಿ ಅಸ್ತಮಾ, ಚರ್ಮರೋಗ, ವಾಯು, ಕೀಲುನೋವು, ಹೊಟ್ಟೆಉರಿ ಸೇರಿ ಅನೇಕ ರೋಗಗಳಿಗೆ ಲೇಹ್ಯ ರೂಪದ ಔಷಧಗಳಿವೆ ಎಂದು ತಿಳಿಸಿದರು.

ನಂತರ ನಡೆದ ಆರೋಗ್ಯ ಉಚಿತ ಶಿಬಿರದಲ್ಲಿ 322 ಜನರು ಆಯುರ್ವೇದ ಪದ್ಧತಿಯಲ್ಲಿ ಹಾಗೂ 180 ಜನರು ಯುನಾನಿ ಪದ್ಧತಿಯ ಚಿಕಿತ್ಸೆ ಲಾಭ ಪಡೆದರು.

ಶಿಬಿರವನ್ನು ಅಲ್‌ಫತೇ ಮೀಲಾದ್ ಕಮಿಟಿ ಅಧ್ಯಕ್ಷ ಶಾಹೇ ಆಲಂ ಉದ್ಘಾಟಿಸಿದರು.

ಸಮಾರಂಭದಲ್ಲಿ ಕಮಿಟಿಯ ಸಂಘಟನಾ ಕಾರ್ಯದರ್ಶಿ ಜಬೀವುಲ್ಲಾ ಬೇಗ್, ಕಾರ್ಯದರ್ಶಿ ಸಮೀ ರಜಾ, ಚಾಮುಡಿಹಳ್ಳಿ ಅಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ.ಅಶೋಕ್, ಡಾ.ತ್ರಿವೇಣಿ, ಹಾರೋಸೋಮನಹಳ್ಳಿ ಆರೋಗ್ಯ ಕೇಂದ್ರದ ವೈದ್ಯ ಡಾ.ಪುಟ್ಟಸ್ವಾಮಿ, ಎಂ.ಶಿವರ ಆಸ್ಪತ್ರೆಯ ಡಾ.ಪವನ್ ಹಾಗೂ ಚೌಳಗಾಲ ಆಯುರ್ವೇದ ಆಸ್ಪತ್ರೆಯ ಡಾ.ಸೌಮ್ಯಾ ಹಾಜರಿದ್ದರು.

 

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....