More

    ಬೆಳೆ ವಿಮೆ ಸೌಲಭ್ಯ ಪಡೆಯಿರಿ

    ಚನ್ನರಾಯಪಟ್ಟಣ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

    ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ರೈತ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನಿಷ್ಠ ಪ್ರೀಮಿಯಮ್ ಮೊತ್ತದಲ್ಲಿ ಗರಿಷ್ಠ ವಿಮೆ ಲಭ್ಯವಾಗುವುದರಿಂದ ಇಂತಹ ಯೋಜನೆಗಳು ರೈತರಿಗೆ ಸಹಕಾರಿಯಾಗಲಿದೆ. ರೈತರು ವಿವಿಧ ಬೆಳೆಗಳಿಗೆ ನಿಗದಿಪಡಿಸಿರುವ ವಿಮಾ ಕಂತು ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.

    ಕೊಬ್ಬರಿಯನ್ನು ನಫೆಡ್ ಮೂಲಕ ಖರೀದಿ ಮಾಡಬೇಕು ಎಂದು ಆಗ್ರಹಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಜನವರಿಯಲ್ಲಿ ಕೊಬ್ಬರಿ ಖರೀದಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ತಾಲೂಕಿನ ರೈತರಿಗೆ ಅನುಕೂಲವಾಗಲೆಂದು ಹಿರಿಸಾವೆ ಹಾಗೂ ಬಾಗೂರು ಹೋಬಳಿಗಳಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲು ಕ್ರಮ ಕೈಗೊಂಡಿರುವಾಗಿ ತಿಳಿಸಿದರು.

    ತಾಲೂಕು ಸಹಾಯಕ ಕೃಷಿ ಅಧಿಕಾರಿಗಳ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ರೈತರಿಗೂ ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನ ಎಲ್ಲ್ಲ ಹೋಬಳಿಗಳ ಕೃಷಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಗುಣಮಟ್ಟದ ಸೇವೆ ನೀಡಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

    ಪ್ರಗತಿಪರ ರೈತರಾದ ದೀಪಕ್, ಜಯರಾಮ್, ತೊಳಸಮ್ಮ, ಧನಂಜಯ, ನಿತಿನ್, ಶಕುಂತಲಾ ಹಾಗೂ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಇ ಕೆವೈಸಿ ಹಾಗೂ ಪೌಷ್ಟಿಕ ಕೈ ತೋಟ ನಿರ್ಮಾಣಕ್ಕೆ ಸಹಕರಿಸಿದ ಕೃಷಿ ಸಖಿಯರಾದ ಭವಾನಿ, ಅಶ್ವಿನಿ, ಮಾನಸಾ, ರಾಜೇಶ್ವರಿ ಅವರನ್ನು ಸನ್ಮಾನಿಸಲಾಯಿತು.

    ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ನಂಜಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಮಂಜಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೇರಳ್ಳಿ ಮಂಜುನಾಥ್, ರೈತ ಮುಖಂಡ ದಿಂಡಗೂರು ಗೋವಿಂದರಾಜು, ಬೆಳಗುಲಿ ಪುಟ್ಟಸ್ವಾಮಿ, ಕೃಷಿ ಅಧಿಕಾರಿಗಳಾದ ಆದರ್ಶ್, ದಿನೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts