More

    ಚುನಾವಣೆ ಸಮಯದಲ್ಲಿ ಮಾತ್ರ ರೈತರ ಜಪ

    ಚಿಕ್ಕಮಗಳೂರು: ರೈತ ವಿರೋಧಿ ಬಿಜೆಪಿಗೆ ಲೋಕಸಭಾ ಚುನಾವಣೆ ಸಮಯದಲ್ಲಿ ರೈತರು ನೆನಪಾಗಿದ್ದಾರೆ. ಬಿಜೆಪಿಗೆ ಮತ ನೀಡುವ ಮೂಲಕ ರೈತರನ್ನು ಗೆಲ್ಲಿಸಿ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಕೆಪಿಸಿಸಿ ವಕ್ತಾರ ರವೀಶ್ ಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
    ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಬಿಜೆಪಿಗೆ ಮತ ನೀಡಿ ರೈತರನ್ನು ಗೆಲ್ಲಿಸಿ ಎಂದಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ಲೇವಡಿ ಮಾಡಿದರು. ರೈತರು ದೆಹಲಿಯಲ್ಲಿ ಚಳವಳಿ ಮಾಡುವಾಗ ಕೇಂದ್ರ ಸರ್ಕಾರ ಮುಳ್ಳಿನ ತಂತಿ ಹಾಕಿಸಿತ್ತು. ರೈತರ ಮೇಲೆ ಜಲ ಪಿರಂಗಿ ಪ್ರಯೋಗಿಸಿದ್ದನ್ನು ಹಾಗೂ ಬಿಜೆಪಿ ನಾಯಕರೊಬ್ಬರು ಪ್ರತಿಭಟನಾಕಾರರ ಮೇಲೆ ಜೀಪು ಹರಿಸಿದ್ದನ್ನು ಬಿಜೆಪಿ ಮುಖಂಡರು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದರು.
    ವರ್ಷಗಳ ಕಾಲ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರೂ ತಿರುಗಿ ನೋಡದ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಇದೀಗ ರೈತರ ಪರವಾಗಿ ಮಾತನಾಡುತ್ತಿದ್ದಾರೆ. ಕೇಂದ್ರ ಕೃಷಿ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಅವರು ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಎಂದೂ ಮಾತನಾಡಿಲ್ಲ. ಈ ಬಗ್ಗೆ ನಿಮಗೆ ನೀವೇ ಪ್ರಶ್ನೆ ಕೇಳಿಕೊಳ್ಳಿ. ಚುನಾವಣೆ ಬಂದಾಗ ಮಾತ್ರ ಬಿಜೆಪಿಗರಿಗೆ ಕಾಫಿ, ಅಡಕೆ, ತೆಂಗು ಬೆಳೆಗಳು ಎದ್ದು ಕಾಣುತ್ತವೆ. ಬಿಜೆಪಿ ರೈತ, ಜನ, ಜೀವ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸೋಲಿನ ಭಯದಲ್ಲಿರುವ ಬಿಜೆಪಿ ವಿವಿ ಪ್ಯಾಟ್‌ಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಂಭವವಿದೆ. ಈಗಾಗಲೇ ಕೇರಳದಲ್ಲಿ ವಿವಿಪ್ಯಾಟ್‌ಗಳ ಸಮಸ್ಯೆ ಚುನಾವಣಾ ಆಯೋಗದ ಗಮನಕ್ಕೂ ಬಂದಿದೆ. ಇದರ ಹಿಂದೆ ಬಿಜೆಪಿ ಕೈವಾಡವಿರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ರೂಬೆನ್ ಮೋಸಸ್, ನಿಜಗುಣಮೂರ್ತಿ, ತನೋಜ್ ನಾಯ್ಡು, ಗೋಪಿ ಉಪಸ್ಥಿತರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts