ಉತ್ತರಾಖಂಡ್​ನಲ್ಲಿ ಭಾರಿ ಮಳೆ..ಚಾರ್ಧಾಮ್ ಯಾತ್ರೆ ಸ್ಥಗಿತ!

ಡೆಹ್ರಾಡೂನ್​: ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಉತ್ತರಾಖಂಡ ಭಾರಿ ಮಳೆಗೆ ತತ್ತರಿಸಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯಕಾರಿಯಾಗಿ ಪರಿಣಮಿಸಿವೆ. ಹಲವೆಡೆ ಭೂಕುಸಿತ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹಳದಿ ಬಿಕಿನಿ ತೊಟ್ಟ ಮಲ್ಲಿಕಾ ಶೆರಾವತ್ ..ಅಭಿಮಾನಿಗಳು ಫಿದಾ!

ಗರ್ವಾಲ್ ಪ್ರದೇಶದಲ್ಲಿ ಭಾನುವಾರ(ಜು.7) ಮತ್ತು ಸೋಮವಾರ(ಜು.8) ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹೀಗಾಗಿ ಚಾರ್ಧಾಮ್ ಯಾತ್ರೆ ಮುಂದೂಡಲಾಗಿದೆ ಎಂದು ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಚಮೋಲಿ ಜಿಲ್ಲೆಯಲ್ಲಿ ಬದರಿನಾಥಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಸರ್ಕಾರ ಆದೇಶ ಹೊರಡಿಸಿದೆ.

ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜಾಗರೂಕರಾಗಿರಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾಲಕಾಲಕ್ಕೆ ಪರಿಸ್ಥಿತಿಯ ಮೇಲೆ ನಿಗಾ ಇಡುವಂತೆ ಆದೇಶಿಸಿದ್ದಾರೆ.

ಈಕೆ ನಿತ್ಯ ಮದುಮಗಳು.. ಎಷ್ಟು ಮದುವೆಯಾಗಿದ್ದಾಳೆ ಗೊತ್ತಾ? ಡಿವೈಎಸ್ಪಿ, ಎಸ್ಪಿ ಸಹ ಪತಿಗಳಾಗಿದ್ದವರೇ!

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…