ಪೆರ್ಡೂರು ಸನ್ನಿಧಾನದಲ್ಲಿಂದು ರಥಸಂಪ್ರೋಕ್ಷಣೆ

pooje
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಅಂಗವಾಗಿ ಕ್ಷೇತ್ರದ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಹೋಮ, ಕಲಶಾಭಿಷೇಕ, ರಥ ಹೋಮ, ರಥಸಂಪ್ರೋಕ್ಷಣೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ಭಾನುವಾರ ನೆರವೇರಲಿದೆ.

ಬೆಳಗ್ಗೆ ಕೊಡಿ ಪೂಜೆ, ಮಹಾಪೂಜೆ, ಮಧ್ಯಾಹ್ನ ರಥಾರೋಹಣ, ಶ್ರೀ ಮನ್ಮಹಾರಥೋತ್ಸವ, ದೀವಟಿಕೆ ಸಲಾಮ್, ನರ್ತನ, ವಾದ್ಯ ಸೇವಾದಿಗಳು, ಹಚ್ಚಡ ಸೇವೆ, ರಥಾವರೋಹಣ, ಪಲ್ಲಕ್ಕಿ ಸುತ್ತು, ತೆಪ್ಪೋತ್ಸವ, ವಾಲಗ ಮಂಟಪ ಪೂಜೆ, ವೇದಪಾರಾಯಣ, ಸಂಗೀತ, ವಾದ್ಯ, ನರ್ತನ ಸೇವೆಗಳು, ಮಹಾಪೂಜೆ, ಮಹಾಪೂಜೆ, ಶ್ರೀಭೂತಬಲಿ, ಕವಾಟಬಂಧನ, ಶಯನೋಲಗ ನಡೆಯಲಿದೆ.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ, ಕಾರ್ಯನಿರ್ವಹಣಾಧಿಕಾರಿ ಗುರುರಾಜ್ ಪಿ.ಆರ್, ಅರ್ಚಕ ಕೃಷ್ಣ ಅಡಿಗ, ಸಮಿತಿ ಸದಸ್ಯರಾದ ರಾಜಕುಮಾರ್ ಶೆಟ್ಟಿ ದೊಡ್ಮನೆ, ದಿನೇಶ್ ಪೂಜಾರಿ ಗರಡಿ ಮನೆ, ಸಂತೆಕಟ್ಟೆ ರಾಮದಾಸ್ ನಾಯ್ಕ ಬುಕ್ಕಿಗುಡ್ಡೆ, ಲಲಿತಾಂಬ ಆನಂದ ಗೌಡ ಕುಕ್ಕುಂಜಾರು ಜೋಗಿ ಬೆಟ್ಟು, ರಾಮ ಕುಲಾಲ್ ಪಕ್ಕಾಲ್, ರಂಜಿತ್ ಪ್ರಭು ಬುಕ್ಕಿಗುಡ್ಡೆ, ಶಾಂತಾ ಆರ್. ಶೆಟ್ಟಿ ವಡ್ಡಮೇಶ್ವರ, ಸಿಬ್ಬಂದಿ ಕ್ಷೇತ್ರದಲ್ಲಿ ಇರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net