More

    ಚಾರ್ಮಾಡಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಎರಡು ವರ್ಷಗಳ ಹಿಂದೆ ಭಾರಿ ಮಳೆಯಿಂದ ಗುಡ್ಡ ಕುಸಿತ ಉಂಟಾದ ಬಳಿಕ ನಿಷೇಧಿಸಲಾಗಿದ್ದ ಮಿನಿ ಹಾಗೂ ಕೆಲವು ಭಾರಿ ವಾಹನಗಳ ಸಂಚಾರಕ್ಕೆ ಪುನಃ ಅವಕಾಶ ಕಲ್ಪಿಸಲಾಗಿದೆ.

    ಕೆಎಸ್‌ಆರ್‌ಟಿಸಿ ಕೆಂಪು ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೆಲರ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಬಹುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ.

    ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್‌, ಕಾರ್ಗೊ ಕಂಟೈನರ್ಸ್ ಹಾಗೂ ಲಾಂಗ್ ಚೇಸಿಸ್ ವಾಹನಗಳು, ಘನ ವಾಣೀಜ್ಯ ವಾಹನಗಳು, ಮಲ್ಟಿ ಎಕ್ಸೆಲ್ ಟ್ರಕ್ ಟೈಲರ್, ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಎಲ್ಲ ಬಗೆಯ ಅಧಿಕ ಭಾರದ ಸರಕು ಸಾಗಾಟ ವಾಹನಗಳ ಸಂಚಾರ ನಿಷೇಧ ಮುಂದುವರಿದಿದೆ.

    ಪ್ರಸ್ತಾಪಿತ ಮಾರ್ಗದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗ ಹಾಸನದವರು ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಮಾರ್ಗದಲ್ಲಿ ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತೆ ಕೈಗೊಳ್ಳಬೇಕು. ವಾಹನಗಳು ನಿಗದಿತ ವೇಗ ಮಿತಿಯೊಂದಿಗೆ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts