23.2 C
Bangalore
Saturday, December 14, 2019

ಚಾರ್ಮಾಡಿ ಘಾಟಿ ರಸ್ತೆ ಶಾಶ್ವತ ಪರಿಹಾರ ದೂರ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಮನೋಹರ್ ಬಳಂಜ ಬೆಳ್ತಂಗಡಿ

ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ, ಶಿರಾಡಿ ಹಾಗೂ ಸಂಪಾಜೆ ಘಾಟಿ ರಸ್ತೆಗಳಿಗೆ ಪರ್ಯಾಯವಾಗಿ ಬಳಕೆಯಾಗುವ ಪ್ರಮುಖವಾದ ಚಾರ್ಮಾಡಿ ಘಾಟ್ ರಸ್ತೆ ಕಳೆದ ಬಾರಿ ಗುಡ್ಡ ಕುಸಿದ ನಂತರವೂ ನಿರೀಕ್ಷಿತ ಅಭಿವೃದ್ಧಿ ಕಂಡಿಲ್ಲ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಗುವ ಈ ರಸ್ತೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಯತ್ನ ನಡೆದಿಲ್ಲ.

ಕಳೆದ ವರ್ಷದ ಮಳೆಗಾಲದಲ್ಲಿ ಮೊದಲು ಅಭಿವೃದ್ಧಿ ಕಾಮಗಾರಿ, ನಂತರ ಭೂಕುಸಿತದಿಂದ ಶಿರಾಡಿ ಘಾಟಿ ರಸ್ತೆ ಬಂದ್ ಆದಾಗ, ಅತ್ತ ಸಂಪಾಜೆಯಲ್ಲೂ ಭೂಕುಸಿತ ಸಂಭವಿಸಿ ಘಟ್ಟದ ಮೇಲ್ಗಡೆ ಸಂಪರ್ಕ ಕಡಿದಾಗ ಬೆಂಗಳೂರು ಸಂಪರ್ಕಿಸಲು ಉಳಿದಿದ್ದ ಏಕೈಕ ರಸ್ತೆ ಚಾರ್ಮಾಡಿ ಘಾಟಿ ಆಗಿತ್ತು.
ಆದರೆ ಅಲ್ಲೂ ಗುಡ್ಡ ಕುಸಿತ, ಮರಗಳು ರಸ್ತೆ ಮೇಲೆ ಉರುಳಿ ಬಿದ್ದು ಹಲವು ದಿನ ವಾಹನ ಸಂಚಾರಕ್ಕೆ ಅಡೆತಡೆಯಾಗಿತ್ತು. ಕೆಲವು ದಿನ ಪ್ರಯಾಣಿಕರು ರಸ್ತೆಯಲ್ಲೇ ದಿಗ್ಬಂಧನಕ್ಕೂ ಒಳಗಾಗಿದ್ದರು. ಆ ಮಳೆಗಾಲ ಮುಗಿದು ಇನ್ನೊಂದು ಮಳೆಗಾಲ ಬಂದರೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಈ ರಸ್ತೆಗೆ ಕಾಯಕಲ್ಪ ಒದಗಿಸಲು ಮುಂದಾಗಿಲ್ಲ. ರಾಜ್ಯ ಸರ್ಕಾರವೂ ಇತ್ತ ಗಮನ ಹರಿಸಿಲ್ಲ.

ತಡೆಗೋಡೆ ಇಲ್ಲದೆ ಅಪಾಯ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂದು ಕಡೆ ನೂರಾರು ಅಡಿ ಆಳದ ಪ್ರಪಾತ, ಇನ್ನೊಂದು ಕಡೆ ಬೃಹತ್ ಗುಡ್ಡ. ರಸ್ತೆಯಲ್ಲಿ ಸುಮಾರು 11 ಅಪಾಯಕಾರಿ ತಿರುವುಗಳಿವೆ. ಆದರೆ ಒಂದು ತಿರುವು ಹೊರತುಪಡಿಸಿದರೆ ಇತರ ಯಾವುದೇ ತಿರುವಿನಲ್ಲಿ ಇದು ಎಷ್ಟನೇ ತಿರುವು ಎಂಬ ಮಾಹಿತಿ ಇಲ್ಲ. ಹಲವು ವರ್ಷಗಳ ಹಿಂದೆ ಹಾಕಿದ ನಾಮಫಲಕಗಳ ಕಂಬಗಳಷ್ಟೇ ಕೆಲವು ತಿರುವುಗಳಲ್ಲಿ ಕಾಣುತ್ತಿದೆ. ಇಲ್ಲಿ ಸೂಚನಾ ಫಲಕಗಳಿದ್ದರೆ ಅಪಾಯಗಳಾದ ಸಂದರ್ಭ ತಾವೆಲ್ಲಿದ್ದೇವೆ ಎಂದು ಇಲಾಖೆಗಳು ಅಥವಾ ಸ್ಥಳೀಯರಿಗೆ ಮಾಹಿತಿ ನೀಡಲು ಅನುಕೂಲವಾಗಬಹುದು.

ಕೆಲವು ತಿರುವುಗಳಲ್ಲಿ ವಾಹನಗಳು ಅಪಘಾತವಾಗಿ ಮುರಿದುಬಿದ್ದ ತಡೆಗೋಡೆ ಇನ್ನೂ ಹಾಗೆಯೇ ಇದ್ದು, ಇದರ ದುರಸ್ತಿ ಅಥವಾ ಹೊಸದಾಗಿ ತಡೆಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಂಡಿಲ್ಲ. ಹಿಂದೆ ಗುಡ್ಡ ಜರಿದ ಪ್ರದೇಶದಲ್ಲಿ ಪ್ರಯಾಣಕ್ಕೆ ಅನುಕೂಲವಾಗುವಂತೆ ಮಣ್ಣು ತೆರವುಗೊಳಿಸಲಾಗಿದೆ, ಆದರೆ ಗುಡ್ಡ ಕುಸಿಯದಂತೆ ತಡೆಯುವ ಪ್ರಯತ್ನ, ಕೆಳಭಾಗದಿಂದ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸಿಲ್ಲ. ಇಂಥ ಅಪಾಯಕಾರಿ ಸ್ಥಳಗಳ ಬಗ್ಗೆ ಸೂಚನಾ ಫಲಕಗಳನ್ನೂ ಅಳವಡಿಸಿಲ್ಲ.

ಭರವಸೆಗಳು ಹುಸಿ
ಘಾಟಿ ರಸ್ತೆಯಲ್ಲಿ ಅನಾಹುತ ನಡೆದಾಗ ಸರ್ಕಾರ, ಸಚಿವರು, ಜಿಲ್ಲಾಡಳಿತ, ಅಧಿಕಾರಿಗಳು ಎಚ್ಚರಗೊಳ್ಳುತ್ತಾರೆ. ಆಗ ಸ್ಥಳಕ್ಕೆ ಭೇಟಿ ನೀಡುವುದು, ಸರಣಿ ಸಭೆಗಳನ್ನು ನಡೆಸುವುದು, ರಸ್ತೆ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡುವುದು ನಡೆಯುತ್ತದೆ. ಆದರೆ ಯಾವುದೂ ಅನುಷ್ಠಾನಕ್ಕೆ ಬರುವುದಿಲ್ಲ. ರಸ್ತೆ ಅಗಲಗೊಳಿಸಿ ಅಭಿವೃದ್ಧಿ, ಅಪಾಯಕಾರಿ ಮರಗಳ ತೆರವುಗೊಳಿಸಲಾಗುವುದು ಎಂದು ಸಚಿವರು, ಮೇಲಧಿಕಾರಿಗಳು ಹೇಳಿದರೂ, ಕಾನೂನು ತೊಡಕುಗಳಿವೆ ಎಂದು ಸ್ಥಳೀಯ ಅಧಿಕಾರಿಗಳು ಹೇಳುತ್ತಾರೆ. ಮಳೆಗಾಲ ಹತ್ತಿರವಾದಾಗ ಮಾತ್ರ ಜನಪ್ರತಿನಿಧಿಗಳು ಈ ಬಗ್ಗೆ ಮಾತನಾಡುತ್ತಾರೆ ಹೊರತು, ಇತರ ಸಂದರ್ಭ ರಸ್ತೆ ಅಭಿವೃದ್ಧಿಗೆ ಮನಸ್ಸು ಮಾಡುವುದಿಲ್ಲ ಎನ್ನುವುದು ಪ್ರಯಾಣಿಕರ ಆಕ್ರೋಶ.

ಏನೇನು ಬೇಡಿಕೆಗಳು?
– ಘಾಟಿ ರಸ್ತೆ ಅಗಲಗೊಳಿಸಿ ಅಭಿವೃದ್ಧಿ
– ಅಪಾಯಕಾರಿ ಸ್ಥಳಗಳಲ್ಲಿ ತಡೆಗೋಡೆ
– ತಿರುವುಗಳ ಮಾಹಿತಿ ಫಲಕ
– ಅಪಾಯಕಾರಿ ಮರಗಳ ತೆರವು
– ಶೌಚಗೃಹಗಳ ನಿರ್ಮಾಣ
– ತುರ್ತು ಚಿಕಿತ್ಸಾ ಕೇಂದ್ರ ಆರಂಭ
– ಬೀದಿದೀಪಗಳ ಅಳವಡಿಕೆ
– ಮೊಬೈಲ್ ಟವರ್

ಘಾಟಿ ರಸ್ತೆಯ ಕೆಲವೆಡೆ ಈಗಾಗಲೇ ಡಾಮರೀಕರಣ ಕಾಮಗಾರಿ ನಡೆಸಿ ದೊಡ್ಡ ಗುಂಡಿಗಳು ಮುಚ್ಚಲಾಗಿದೆ. ಸಮಸ್ಯೆ ಈಗಾಗಲೇ ಸಂಬಂಧಪಟ್ಟ ಇಲಾಖೆಯವರೊಂದಿಗೆ ಮಾತುಕತೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ತೊಂದರೆಯಾಗಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ಮತ್ತೊಮ್ಮೆ ಈ ಬಗ್ಗೆ ಅಧಿಕಾರಿಗಳು, ಇಲಾಖೆಯ ಗಮನಕ್ಕೆ ತರುತ್ತೇನೆ.
– ಹರೀಶ್ ಪೂಂಜ, ಬೆಳ್ತಂಗಡಿ ಶಾಸಕ

ಕಳೆದ ವರ್ಷ ಗುಡ್ಡ ಕುಸಿತ ಸಂದರ್ಭ ರಸ್ತೆಗೆ ಉರುಳಿದ ಮರಗಳನ್ನು ಇಲಾಖೆ ತಕ್ಷಣ ತೆರವುಗೊಳಿಸಿತ್ತು. ಮೇಲಧಿಕಾರಿಗಳು ಸೂಚಿಸಿದ 13 ಅಪಾಯಕಾರಿ ಮರ ತೆರವುಗೊಳಿಸಿದ್ದೇವೆ. ಮಳೆಗಾಲದಲ್ಲಿ ಮರಗಳು ಧರೆಗುರುಳಿದರೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಇಲಾಖೆ ಸನ್ನದ್ದವಾಗಿದ್ದು, ತಕ್ಷಣ ಕಾರ್ಯಪ್ರವೃತ್ತವಾಗಲಿದ್ದೇವೆ.
– ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ, ಬೆಳ್ತಂಗಡಿ

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...