More

    ವಿದ್ಯಾರ್ಥಿಗಳಿಂದ ಚವಡಳ್ಳಿ ಗ್ರಾಪಂಗೆ ಮುತ್ತಿಗೆ

    ಮುಂಡಗೋಡ: ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡದ ಪರಿಣಾಮ ತಾಲೂಕಿನ ಚವಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೋಮವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ತಾಲೂಕಿನ ಚವಡಳ್ಳಿ ಶಾಲೆಯಲ್ಲಿ 1 ರಿಂದ 8ನೇ ತರಗತಿಯವರೆಗೆ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ದಿನ ಬೆಳಗಾದರೆ ಮಕ್ಕಳಿಗೆ ಕುಡಿಯಲು, ಬಿಸಿ ಊಟದ ತಯಾರಿ ಹಾಗೂ ಶೌಚಗೃಹದ ಬಳಕೆಗೆಂದು ಸಾಕಷ್ಟು ಪ್ರಮಾಣದ ನೀರಿನ ಅವಶ್ಯಕತೆ ಇರುತ್ತದೆ. ಆದರೆ, ಬಳಸಲೂ ಇಲ್ಲದೇ ಕುಡಿಯಲೂ ನೀರಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

    ಈ ಕುರಿತು ಗ್ರಾಮ ಪಂಚಾಯಿತಿಗೆ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಶಾಲಾ ಸಮಿತಿಯವರು, ಪಾಲಕರು ತಮ್ಮ ಮಕ್ಕಳೊಂದಿಗೆ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಗ್ರಾಮ ಪಂಚಾಯಿತಿ ಪಿಡಿಒ ಗಣಪತಿ ಪಿಲ್ಲೋಜಿ ಮಾತನಾಡಿ, ಅಡುಗೆ ಹಾಗೂ ಬಳಕೆ ಮಾಡುವ ನೀರನ್ನು ಸಮರ್ಪಕವಾಗಿ ಪೂರೈಸುತ್ತಿದ್ದು, ಕುಡಿಯಲು ಸರಬರಾಜು ಮಾಡುವಲ್ಲಿ ಸ್ವಲ್ಪ ಹಿನ್ನಡೆಯಾಗಿದ್ದು, ಆದಷ್ಟು ಬೇಗ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

    ಎಸ್​ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಾಲಕರು, ಶಾಲಾ ಬೋಧಕ ವರ್ಗ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts