More

    ಭಾರತದ ಐಕ್ಯತೆಯಲ್ಲಿ ನಾರಿಯರ ಪಾತ್ರ ಪ್ರಮುಖ: ಎಂಎಲ್‌ಸಿ ಮಧು ಮಾದೇಗೌಡ ಶ್ಲಾಘನೆ

    ಮಂಡ್ಯ: ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಈ ನಿಟ್ಟಿನಲ್ಲಿ ಭಾರತದ ಐಕ್ಯತೆಯಲ್ಲಿ ಮಹಿಳಾ ಪಾತ್ರ ಪ್ರಮುಖ ಎಂದು ವಿಧಾನ ಪರಿಷತ್ ಸದಸ್ಯರೂ ಆದ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಮಧು ಜಿ.ಮಾದೇಗೌಡ ಹೇಳಿದರು.
    ನಗರದ ಗಾಂಧಿಭವನದಲ್ಲಿ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನ ಮತ್ತು ವಿಶೇಷ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಇಂತಹ ಹತ್ತು ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಿದೆ. ಇಂದಿನ ಯುಗದಲ್ಲಿ ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿರುವವರು ಸಾಕಷ್ಟಿದ್ದಾರೆ. ಅಂತಹವರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕಿದೆ ಎಂದರು.
    ಕ್ಷೇತ್ರ ಸಂವಹನ ಕಾರ್ಯಾಲಯದ ಉಪ ನಿರ್ದೇಶಕಿ ಡಾ.ಟಿ.ಸಿ.ಪೂರ್ಣಿಮಾ ಮಾತನಾಡಿದರು. ಜೆಎಸ್‌ಎಸ್ ಜನಶಿಕ್ಷಣ ಸಂಸ್ಥೆ ನಿರ್ದೇಶಕ ಎ.ಪಿ.ರಮೇಶ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ, ಮೇಲ್ವಿಚಾರಕಿ ಲಕ್ಷ್ಮೀ, ಕ್ಷೇತ್ರ ಪ್ರಚಾರ ಸಹಾಯಕ ಪಿ.ದರ್ಶನ್ ಇತರರಿದ್ದರು.
    ಇದೇ ಸಂದರ್ಭದಲ್ಲಿ ಸಾಧನೆ ಮಾಡಿರುವ ಮಹಿಳೆಯರ ಸಾಕ್ಷ್ಯಚಿತ್ರದ ಪ್ರದರ್ಶನ ನಡೆಯಿತು. ನಂತರ ವಿವಿಧ ಸ್ಪರ್ಧೆಯ ವಿಜೇತ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts