More

    ಚೆಕ್‌ಪೋಸ್ಟ್‌ಗಳಲ್ಲಿ ಅನುಮಾನ ಬರುವ ಎಲ್ಲ ವಾಹನ ಸರಿಯಾಗಿ ಪರಿಶೀಲಿಸಿ

    ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಸೂಚಿಸಿದರು.

    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಎಸ್.ಎಸ್.ಟಿ ಹಾಗೂ ಎ್.ಎಸ್.ಟಿ ತಂಡಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

    ಚೆಕ್‌ಪೋಸ್ಟ್‌ಗಳಲ್ಲಿ ಅನುಮಾನ ಬರುವ ಎಲ್ಲ ವಾಹನಗಳನ್ನು ಸರಿಯಾಗಿ ಪರಿಶೀಲಿಸಬೇಕು. ದಾಖಲೆಗಳಿಲ್ಲದೆ ಸಿಗುವಂತಹ ಹಣ, ಮದ್ಯ, ಮಾದಕದ್ರವ್ಯಗಳು ಹಾಗೂ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡು ಕೂಡಲೆ ವರದಿ ಮಾಡಬೇಕೆಂದು ಹೇಳಿದರು.

    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರೀತಿಯ ಉಲ್ಲಂಘನೆ ಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ನಿರ್ದೇಶನ ನೀಡಿದರು.

    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಕೆ.ಎ.ದಯಾನಂದ ಮಾತನಾಡಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ದಾಖಲೆಗಳಿಲ್ಲದ ಹಣ, ಮದ್ಯ, ಮಾದಕದ್ರವ್ಯಗಳು ಹಾಗೂ ಇನ್ನಿತರೆ ವಸ್ತುಗಳ ಮೇಲೆ ಹೆಚ್ಚು ನಿಗಾವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಮತಗಟ್ಟೆಗಳ ಬಳಿ ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳನ್ನು ಸ್ವಯಂ ಸೇವಕರನ್ನಾಗಿ ನಿಯೋಜಿಸಿಕೊಂಡು ಮತದಾರರಿಗೆ ಅಗತ್ಯ ಮಾಹಿತಿ ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ಸರಿಯಾಗಿ ನಿಲುಗಡೆ ಮಾಡುವ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.

    ಮತದಾರರೆಲ್ಲರೂ ಮತಗಟ್ಟೆಗಳ ಮಾಹಿತಿ ತಿಳಿಯುವ ಸಲುವಾಗಿ ಈ ಬಾರಿ ಮತದಾರಿರಿಗೆ ನೀಡುವ ಚೀಟಿಗಳಲ್ಲಿ ಲೊಕೆಶನ್‌ವುಳ್ಳ ಕ್ಯೂಆರ್ ಕೋಡ್ ಅಳವಡಿಸಿದ್ದು, ಅದನ್ನು ಸ್ಕ್ಯಾನ್ ಮಾಡಿದರೆ ನೇರವಾಗಿ ಮತಗಟ್ಟೆಗೆ ತೆರಳಬಹುದಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಎಂ.ಸಿ.ಸಿ. ನೋಡಲ್ ಅಧಿಕಾರಿ ಬಾಲಚಂದ್ರ, ಪೊಲೀಸ್ ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಸೈದುಲ್ ಅದಾವತ್, ಚುನಾವಣಾ ವೆಚ್ಚ ನೋಡಲ್ ಅಧಿಕಾರಿ ಕೆ. ಲಲಿತ, ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts