ಚಿನ್ನ, ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ! ಹೀಗಿದೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರಪಟ್ಟಿ |Gold Rates

gold
Published on

Gold Rates: ಕಳೆದ ಎರಡು ವಾರಗಳಿಂದ ಬಾನಿಗೆ ಜಿಗಿಯುತ್ತಾ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಚಿನ್ನದ ಬೆಲೆ ಇಂದು ಕೊಂಚ ಇಳಿಕೆ ಕಂಡಿದೆ.

ಸೋಮವಾರ (ಸೆ.08) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 110 ರೂ. ಕುಸಿದಿದೆ. ಇನ್ನು 22 ಕ್ಯಾರೆಟ್ ಬೆಲೆ 100 ರೂ. ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಕೂಡ ಸ್ವಲ್ಪ ಇಳಿಕೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ ಒಂದು ಡಾಲರ್ ಕುಸಿದಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನವು 3,586 ಡಾಲರ್‌ನಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಇಳಿದಿದೆ. ಒಂದು ಕೆಜಿ ಬೆಳ್ಳಿ ಬೆಲೆ 1000 ರೂ. ಕಡಿಮೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 99,500 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,08,510 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 99,350 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,08,380 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 99,350 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,08,380 ರೂ. ಆಗಿದೆ.

ಬೆಳ್ಳಿ ಬೆಲೆ 1,000 ರೂ. ಕುಸಿತ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,27,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,37,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,37,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net