ಏರಿಕೆ ಬೆನ್ನಲ್ಲೇ ದಿಢೀರ್​ ಇಳಿದ ಚಿನ್ನದ ಬೆಲೆ! ಇಂದು 10 ಗ್ರಾಂ ಗೋಲ್ಡ್​ ದರ ಎಷ್ಟಿದೆ? ಹೀಗಿದೆ ನೋಡಿ ವಿವರ | Gold Rates

ವಿಜಯವಾಣಿ (66)
Published on

Gold Rates: ಕಳೆದ ಎರಡು ವಾರಗಳಲ್ಲಿ ಭಾರೀ ಏರಿಕೆಗೊಂಡ ಚಿನ್ನದ ಬೆಲೆ, ಇಂದು ದಿಢೀರ್ ಇಳಿಕೆ ಕಂಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಒಂದು ಲಕ್ಷ ರೂ. ಗಡಿದಾಟಿ ಹೋಗಿರುವ ಗೋಲ್ಡ್ ಬೆಲೆ ಕಡೆಗೂ ಇಳಿಕೆಯತ್ತ ಮುಖ ಮಾಡಿರುವುದು ಚಿನ್ನದಂತ ಖರೀದಿದಾರರಲ್ಲಿ ಹೊಸ ಭರವಸೆ ತಂದಿದೆ. ಮದುವೆ, ಶುಭ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡಬೇಕು ಎಂಬ ಯೋಚಿಸುತ್ತಿದ್ದೀರಾ? ಹಾಗಿದ್ದರೆ, ಈ ಸುದ್ದಿ ನಿಮಗಾಗಿ.

ಚಿನ್ನ-ಬೆಳ್ಳಿ ಇಳಿಕೆಯತ್ತ..

ಇಂದು ಚಿನ್ನದ ಬೆಲೆ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಅನಿಶ್ಚಿತತೆಯಿಂದಾಗಿ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ತೀವ್ರವಾಗಿ ಏರಿಕೆ ಕಂಡಿತ್ತು. ಆದಾಗ್ಯೂ, ಇಂದಿನ ಚಿನ್ನದ ದರ ಗಣನೀಯವಾಗಿ ಕುಸಿದಿದೆ. ಶುಕ್ರವಾರ (ಜೂ.20) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 600 ರೂ. ಕಡಿಮೆಯಾಗಿದೆ. 22 ಕ್ಯಾರೆಟ್ ಚಿನ್ನದ ದರ 550 ರೂ. ಇಳಿದಿದೆ. ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಇಳಿಕೆಯಾಗಿದೆ.

ಒಂದು ಔನ್ಸ್ ಚಿನ್ನದ ಬೆಲೆ 18 ಡಾಲರ್​ ಕಡಿಮೆಯಾಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನದ ಬೆಲೆ 3,356 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ. ಭಾರತದಲ್ಲಿ, ಒಂದು ಕೆಜಿ ಬೆಳ್ಳಿಯ ಬೆಲೆ 2,000 ರೂ. ಇಳಿಕೆ ಕಂಡಿದೆ. ಇಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಾಗಿದೆ? ಎಂಬುದರ ವಿವರ ಹೀಗಿದೆ ಗಮನಿಸಿ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟಿದೆ?

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 92,250 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,00,630 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 92,100 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,00,480 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 92,100 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,00,480 ರೂ. ಆಗಿದೆ.

ಬೆಳ್ಳಿ ಬೆಲೆ ಸ್ಥಿರ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,10,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,20,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,20,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net