

Gold Rates: ದಿನ ಕಳೆದಂತೆ ಚಿನ್ನದ ದರದಲ್ಲಿ ಇಳಿಕೆ ಕಾಣುತ್ತಿದೆ ಎಂದು ಸಂತಸದಲ್ಲಿದ್ದ ಗ್ರಾಹಕರಿಗೆ ಇದೀಗ ಮತ್ತೇ ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಚಿನ್ನದ ದರವು ದಿಢೀರ್ ಹಾಗೂ ಭಾರೀ ಹೆಚ್ಚಳ ಕಂಡಿದೆ. 1 ಲಕ್ಷ ರೂ. ಗಡಿದಾಟಿದ ಚಿನ್ನದ ಬೆಲೆ, ಇಂದೂ ಕೂಡ ಏರಿಕೆಯಾಗಿದೆ.
ಇಂದು ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 280 ರೂ. ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 250 ರೂ. ಹೆಚ್ಚಳ ಕಂಡಿದೆ. ಆದಾಗ್ಯೂ, ಕಳೆದ ನಾಲ್ಕು ದಿನಗಳಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 4 ಸಾವಿರ ರೂ. ಹೆಚ್ಚಳ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯೂ ಹೊಸ ದಾಖಲೆಗಳನ್ನು ದಾಖಲಿಸುತ್ತಿರುವುದು ಸದ್ಯ ಚಿನ್ನದ ಗ್ರಾಹಕರಲ್ಲಿ ಆಘಾತ ತಂದೊಡ್ಡಿದೆ. ಒಂದು ಔನ್ಸ್ ಚಿನ್ನದ ಬೆಲೆ 55 ಡಾಲರ್ ಹೆಚ್ಚಾಗಿದ್ದು, ಪ್ರಸ್ತುತ ಒಂದು ಔನ್ಸ್ 3,433 ಡಾಲರ್ಗಳಲ್ಲಿ ವಹಿವಾಟು ನಡೆಸುತ್ತಿದೆ.
ಚಿನ್ನದ ಬೆಲೆಯಲ್ಲಿ ತೀವ್ರ ಏರಿಕೆಗೆ ಕಾರಣ ಇರಾನ್-ಇಸ್ರೇಲ್ ನಡುವಿನ ಭೀಕರ ಯುದ್ಧ ಎಂದು ತಜ್ಞರು ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಯುಎಸ್ ಡಾಲರ್ನಲ್ಲಿನ ಕುಸಿತ ಮತ್ತು ಚೀನಾ-ಯುಎಸ್ ನಡುವೆ ನಡೆಯುತ್ತಿರುವ ವ್ಯಾಪಾರ ಸಮರ ಹಿನ್ನೆಲೆಯಲ್ಲಿ, ಚಿನ್ನದ ಬೆಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮೇಣವಾಗಿ ಏರುತ್ತಿವೆ. ಇದು ಹೀಗೆ ಮುಂದುವರಿದರೆ, ಕೆಲವೇ ದಿನಗಳಲ್ಲಿ ಪ್ರತಿ ಔನ್ಸ್ಗೆ ಚಿನ್ನದ ಬೆಲೆ 1.5 ಲಕ್ಷ ರೂ. ತಲುಪುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.
ನಿಮ್ಮ ಗಮನಕ್ಕೆ: ಮೇಲೆ ತಿಳಿಸಲಾದ ದರ ಇಂದು ಬೆಳಗ್ಗೆ 10 ಗಂಟೆಯವರೆಗೆ ದಾಖಲಾದ ಮಾಹಿತಿ. ಚಿನ್ನ-ಬೆಳ್ಳಿ ಬೆಲೆಗಳು ದಿನಕ್ಕೆ ಹಲವು ಬಾರಿ ಏರುಪೇರು ಆಗುತ್ತಿರುತ್ತವೆ. ನಿಖರವಾದ ಬೆಲೆಗಳಿಗಾಗಿ, ನಿಮ್ಮ ಹತ್ತಿರದ ಆಭರಣ ಮಳಿಗೆ ಅಥವಾ ಅಧಿಕೃತ ವೆಬ್ಸೈಟ್ ದರ ಪರಿಶೀಲಿಸಿ.