'ಚಿನ್ನ'ಕ್ಕೆ ಬೆಳ್ಳಿ ಪೈಪೋಟಿ! ಒಂದೇ ದಿನ 6,000 ರೂ. ಏರಿಕೆ; ಹೀಗಿದೆ ಇಂದಿನ ಗೋಲ್ಡ್​-ಸಿಲ್ವರ್​ ದರ | Gold Price

gold
Published on

Gold Price: ಮದುವೆ, ಶುಭ ಕಾರ್ಯಕ್ರಮಗಳು, ಹಬ್ಬ-ಹರಿದಿನಗಳು ಸಾಲುಗಟ್ಟಿ ನಿಂತಿರುವಾಗಲೇ ಚಿನ್ನದ ದರವು ಗಗನಕ್ಕೇರಿವೆ. ಇದು ಚಿನ್ನದಂತ ಗ್ರಾಹಕರನ್ನು ತೀರ ಚಿಂತೆಗೆ ದೂಡಿದೆ. ದಿನ ಕಳೆದಂತೆ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ದುಬಾರಿಯಾಗುತಲ್ಲೇ ಇವೆ. ಕಳೆದ ಎರಡ್ಮೂರು ದಿನಗಳಿಂದ ಕುಸಿದಿದ್ದ ಬೆಲೆಗಳು ಇದೀಗ ಇನ್ನಷ್ಟು ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ, ಹೂಡಿಕೆದಾರರು ಸ್ಥಿರ ಆದಾಯವನ್ನು ನೀಡುವ ಸರಕು ಮಾರುಕಟ್ಟೆಗಳತ್ತ ಒಲವು ತೋರುತ್ತಿದ್ದಾರೆ. ಅದರ ಭಾಗವಾಗಿ, ಬೆಲೆಗಳಲ್ಲಿ ಬದಲಾವಣೆಗಳಿವೆ ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಮತ್ತೊಂದೆಡೆ, ಬೆಳ್ಳಿಯ ಬೆಲೆ ಹೊಸ ದಾಖಲೆಗಳತ್ತ ಮುಖಮಾಡಿದೆ.

ಇಂದು ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ 10 ಗ್ರಾಂ ಚಿನ್ನದ ಬೆಲೆ 600 ರೂ. ಹೆಚ್ಚಾಗಿದೆ. 22 ಕ್ಯಾರೆಟ್ ಚಿನ್ನದ 550 ರೂ. ಏರಿಕೆಯಾಗಿದೆ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಹೆಚ್ಚಾಗಿದೆ. ಒಂದು ಔನ್ಸ್ ಗೋಲ್ಡ್​ ಬೆಲೆ 20 ಡಾಲರ್ ಜಾಸ್ತಿಯಾಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನದ ಬೆಲೆ 3,759 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ.

ಇಂದು ಒಂದೇ ದಿನ ಒಂದು ಕೆಜಿ ಬೆಳ್ಳಿಯ ಬೆಲೆ 6,000 ರೂ. ಹೆಚ್ಚಾಗಿದೆ. ಕಳೆದ 9 ದಿನಗಳಲ್ಲಿ, ಕೆಜಿ ಬೆಳ್ಳಿಯ ದರ 18,000 ರೂ. ಏರಿಕೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,59,000 ರೂ. ತಲುಪಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,06,000 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,15,630 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,05,850 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,15,480 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,05,850 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,15,480 ರೂ. ಆಗಿದೆ.

ಬೆಳ್ಳಿ ಬೆಲೆ 6,000 ರೂ. ಹೆಚ್ಚಳ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,49,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,59,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,59,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net