ಚುನಾವಣಾ ಅಕ್ರಮ ತಡೆಯಲು ಚೆಕ್​ಪೋಸ್ಟ್​ಗಳ ನಿರ್ಮಾಣ

ಕುಂದಾಪುರ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಅಕ್ರಮ ತಡೆಯುವ ನಿಟ್ಟಿನಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ ನಿರ್ಮಾಣ ಮಾಡಲಾಗಿದೆ. ಲೋಕಸಭಾ ಕ್ಷೇತ್ರದ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್‌ ಕಾರ್ಯನಿರ್ವಹಿಸುತ್ತಿದೆ

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಎಸ್ಪಿ ನಿಶಾ ಜೇಮ್ಸ್ ಹಾಗೂ ಉಡುಪಿ ಜಿಲ್ಲಾ ಪೊಲೀಸರ ತಂಡ ಮಂಗಳವಾರ ರಾತ್ರಿ ಅಲ್ಲಲ್ಲಿ ದಿಢೀರ್ ಚೆಕ್ ಪೋಸ್ಟ್‌ಗೆ ಭೇಟಿ ಕಾರ್ಯ ನಡೆಸಿದೆ. ಜಿಲ್ಲೆಯ ಗಡಿ ಭಾಗವಾದ ಶೀರೂರು ಚೆಕ್ ಪೋಸ್ಟ್‌ ಗೆ ಅನಿರೀಕ್ಷಿತವಾಗಿ ಕಾರ್ಕಳ ಎಎಸ್ಪಿ ಜತೆ ಡಿಸಿ, ಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೆ ಕೊಲ್ಲೂರು ಚೆಕ್ ಪೋಸ್ಟ್‌ ಗೆ ಉಡುಪಿ ಎಸ್ಪಿ ನಿಶಾ ಜೇಮ್ಸ್ ಜತೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆಯನ್ನುನಡೆಸಿದರು.