More

    ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾ ವಹಿಸಿ

    ಬೆಳಗಾವಿ: ನೆರೆಯ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಧಾಮಣೆ ಗ್ರಾಮದ ಮತಗಟ್ಟೆಗೆ ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.

    ಮತಗಟ್ಟೆಯಲ್ಲಿರುವ ಮೂಲ ಸೌಕರ್ಯ ಕುರಿತು ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ, ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಎಲ್ಲ ವ್ಯವಸ್ಥೆ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

    ಮತಗಟ್ಟೆಯು ಗಡಿಭಾಗದಲ್ಲಿ ಇರುವುದರಿಂದ ತುರ್ತು ದೂರವಾಣಿ ಸಂಪರ್ಕ ವ್ಯವಸ್ಥೆ ಖಾತ್ರಿಪಡಿಸಿಕೊಳ್ಳಬೇಕು. ಕುಡಿಯುವ ನೀರು, ವಿದ್ಯುತ್, ಶೌಚಗೃಹ ಹೀಗೆ ಎಲ್ಲ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಸಮರ್ಪಕ ಸಾರಿಗೆ ಮತ್ತಿತರ ಸೌಲಭ್ಯ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಹಿಂಡಲಗಾ ಮತಗಟ್ಟೆ ವೀಕ್ಷಣೆ: ಲೋಕಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಗಡಿಭಾಗದ ರಕ್ಕಸಕೊಪ್ಪ ಬಳಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್ ಮತ್ತು ಅಬಕಾರಿ ತನಿಖಾ ಠಾಣೆಗೂ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ, ಅಲ್ಲಿನ ದಾಖಲೆಗಳನ್ನು ಪರಿಶೀಲಿಸಿದರು. ಉಪ ಚುನಾವಣೆ ಸಮೀಪಿಸುತ್ತಿರುವುದರಿಂದ ಗಡಿಭಾಗದಲ್ಲಿ ಚೆಕ್‌ಪೋಸ್ಟ್ ಮತ್ತು ಅಬಕಾರಿ ತನಿಖಾ ಠಾಣೆಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts