More

    ಚೆಕ್‌ಪೋಸ್ಟ್‌ಗಳಲ್ಲಿ ಪ್ರಯಾಣಿಕರ ತಪಾಸಣೆ

    ಬೆಳಗಾವಿ: ಕರೊನಾ ‘ಹಾಟ್‌ಸ್ಪಾಟ್’ ಮಹಾರಾಷ್ಟ್ರದಿಂದ ರಾಜ್ಯದ ಗಡಿ ಪ್ರವೇಶಿಸುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕೋವಿಡ್-19 ಪರೀಕ್ಷೆ ತೀವ್ರಗೊಳಿಸಿದೆ. ಅಲ್ಲದೆ, ಕರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಅಂತಾರಾಜ್ಯ, ಜಿಲ್ಲಾ ಪ್ರವಾಸ ಕೈಗೊಳ್ಳುವವರ ಮೇಲೆ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಂಡಿದೆ.

    ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕರೊನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿದ್ದು, ಗಡಿ ಹಂಚಿಕೊಂಡಿರುವ ಅಥಣಿ, ಚಿಕ್ಕೋಡಿ, ಕಾಗವಾಡ, ನಿಪ್ಪಾಣಿ ತಾಲೂಕುಗಳಲ್ಲಿ ಹಾಗೂ ಬೆಳಗಾವಿ, ಖಾನಾಪುರ ತಾಲೂಕಿನ ಗ್ರಾಮಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಚಿಕ್ಕೋಡಿ, ಬೆಳಗಾವಿ ವಿಭಾಗದಲ್ಲಿ 10ಕ್ಕೂ ಅಧಿಕ ಚೆಕ್‌ಪೋಸ್ಟ್ ತೆರೆದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿದ್ದಾರೆ.

    ಅಡ್ಡದಾರಿಗಳಲ್ಲೂ ತಪಾಸಣೆ: ಮಹಾರಾಷ್ಟ್ರ ಗಡಿ ಭಾಗ ಹೊಂದಿಕೊಂಡಿರುವ 190 ಕಿ.ಮೀ. ಉದ್ದದ ಪ್ರದೇಶ ವ್ಯಾಪ್ತಿಯಲ್ಲಿ 40 ಹಳ್ಳಿಗಳಲ್ಲಿನ ಅಡ್ಡ ದಾರಿಗಳ ಮೂಲಕ ಜನರು ಅಕ್ರಮವಾಗಿ ಪ್ರವೇಶ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಂತಹ ಹಳ್ಳಿಗಳಲ್ಲಿ ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಪ್ರತಿ ಚೆಕ್‌ಪೋಸ್ಟ್‌ನಲ್ಲಿ ಕಂದಾಯ ಇಲಾಖೆ, ಗ್ರಾಪಂ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಗತ್ಯಬಿದ್ದರೆ ಮುಂದಿನ ದಿನಗಳಲ್ಲಿ 24ಗಿ7 ಮಾದರಿಯಲ್ಲಿ ಚೆಕ್‌ಪೋಸ್ಟ್‌ನಲ್ಲಿ ಸರತಿ ಆಧಾರದ ಮೇಲೆ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಹಾರಾಷ್ಟ್ರದಲ್ಲಿ ಕರೊನಾ ಸೋಂಕಿತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಕರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮಂಗಳವಾರದಿಂದ ಬಾಚಿ, ಬೆಕ್ಕಿನಕೇರಿ, ಚಲುವೆನಹಟ್ಟಿ, ರಕ್ಕಸಕೊಪ್ಪಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ. ಗರ್ಭಿಣಿಯರು, ರೋಗಿಗಳು ವೈದ್ಯಕೀಯ ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
    | ಎಂ.ಜಿ. ಹಿರೇಮಠ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts