More

    ಬಾವಿಗೆ ಬಿದ್ದ ಚಿರತೆ ರಕ್ಷಣೆ

    ಕುಂದಾಪುರ: ಇಲ್ಲಿನ ಸೌಕೂರು ದೇವಸ್ಥಾನದ ಬಳಿ ಆಹಾರವರಸಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.

    ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ದೇವಸ್ಥಾನ ಸಮೀಪದ ನಿವಾಸಿಯೊಬ್ಬರ ಮನೆಯ ಬಾವಿಗೆ ಚಿರತೆ ಬಿದ್ದಿದೆ. ತಕ್ಷಣ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಹಾಗೂ ನೇರಳಕಟ್ಟೆಯ ಅಧಿಕಾರಿ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬಂದಿದ್ದರು. ಮೊದಲಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಿದ್ದು ಬಳಿಕ ಬೋನನ್ನು ಇಳಿಸಿ ಚಿರತೆ ಅದರೊಳಕ್ಕೆ ಹೋದ ನಂತರ ನಾಜೂಕಾಗಿ ಮೇಲಕ್ಕೆತ್ತಿ ರಕ್ಷಣೆ ಮಾಡಲಾಯಿತು.

    2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು ಆರೋಗ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಕಂಡ್ಲೂರಿ ಅರಣ್ಯ ಅಧಿಕಾರಿ ಹೇಮಾ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts