ಚೆನ್ನೈ ಮಾದರಿ ಪ್ಲಾಸ್ಟಿಕ್ ನಿಷೇಧ

ಬೆಂಗಳೂರು: ಪ್ಲಾಸ್ಟಿಕ್ ನಿಷೇಧ ಕುರಿತು ಚೆನ್ನೈನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ನಗರದಲ್ಲೂ ಅನುಷ್ಠಾನಗೊಳಿಸಲು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಶೀಘ್ರದಲ್ಲಿ ಚೆನ್ನೈಗೆ ತೆರಳಲಿದ್ದಾರೆ.

ರಾಜ್ಯಾದ್ಯಂತ 40 ಮೈಕ್ರಾನ್​ಗಿಂತ ಕಡಿಮೆ

ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸ ಲಾಗಿದೆ. ಆದರೂ, ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾತ್ರ ನಿಂತಿಲ್ಲ. ಹೀಗಾಗಿಯೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಲ್ಲಿ ಶೇ.10ಕ್ಕೂ ಹೆಚ್ಚು ಭಾಗ ಪ್ಲಾಸ್ಟಿಕ್ ತ್ಯಾಜ್ಯವಾಗಿದ್ದು, ಅದರ ಸಂಸ್ಕರಣೆ ಕಷ್ಟವಾಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಮುಂದಾಗಿರುವ ಬಿಬಿಎಂಪಿ ಬೇರೆ ನಗರಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಅಧ್ಯಯನ ನಡೆಸಲು ನಿರ್ಧರಿಸಿದೆ.

ಚೆನ್ನೈಗೆ ತೆರಳಲಿರುವ ಅಧಿಕಾರಿಗಳು: ಸದ್ಯ ದೇಶದಲ್ಲಿಯೇ ಚೆನ್ನೈನಲ್ಲಿ ಪ್ಲಾಸ್ಟಿಕ್ ನಿಷೇಧ ಕ್ರಮ ಯಶಸ್ವಿಯಾಗಿದೆ. ಚೆನ್ನೈ ನಗರದೊಳಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.ಅಲ್ಲಿ ಅಧ್ಯಯನ ನಡೆಸಲು ಬಿಬಿಎಂಪಿ ಅಧಿಕಾರಿಗಳು ಅಲ್ಲಿಗೆ ತೆರಳಲು ಮುಂದಾಗಿದ್ದಾರೆ. ಆರೋಗ್ಯ ವಿಭಾಗದ ಐವರು ಆರೋಗ್ಯಾಧಿಕಾರಿಗಳು ಇನ್ನು 10 ದಿನದಲ್ಲಿ ಚೆನ್ನೈಗೆ ತೆರಳಿ ಅಲ್ಲಿನ ಕ್ರಮಗಳ ಬಗ್ಗೆ ಮಾಹಿತಿ ಪಡೆದು ವರದಿ ಸಿದ್ಧಪಡಿಸಲಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ಬಳಕೆ ಮೇಲೆ ಕಡಿವಾಣ ಹಾಕಲು ಚೆನ್ನೈನಲ್ಲಿ ಕೈಗೊಂಡಿರುವ ಕ್ರಮಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದಕ್ಕಾಗಿ ಚೆನ್ನೈಗೆ ತೆರಳಿ, ಅಲ್ಲಿ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದು, ವರದಿ ಸಿದ್ಧಪಡಿಸಲಿದ್ದಾರೆ. ಆನಂತರ ಅದನ್ನು ಬೆಂಗಳೂರಿನಲ್ಲೂ ಅನುಷ್ಠಾನಗೊಳಿಸಲಾಗುವುದು.

| ಗಂಗಾಂಬಿಕೆ, ಮೇಯರ್