

ಬೆಂಗಳೂರು: ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದಿನಿಂದ (ನ.07)ಪ್ರಾಯೋಗಿಕ ಸಂಚಾರ ಆರಂಭಿಸಿದೆ.
ನ.11ರಂದು ಪ್ರಧಾನಿ ಮೋದಿ, ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ತಾಂತ್ರಿಕ ದೋಷ ಪತ್ತೆಗಾಗಿ ಪ್ರಾಯೋಗಿಕವಾಗಿ ಸಂಚಾರ ಆರಂಭಿಸಲಾಗಿದೆ.
ಇಂದು ಬೆಳಗ್ಗೆ 10.20ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದ ರೈಲು, ತಕ್ಷಣ ಮೈಸೂರಿಗೆ ತೆರಳಿದೆ.