ಮಕ್ಕಳ ಮುಕ್ತ ಚೆಸ್ ಸ್ಪರ್ಧೆ ಉದ್ಘಾಟನೆ

New Project (23)
Published on

ಸುಳ್ಯ: ತಾಲೂಕು ಗೌಡರ ಯುವ ಸೇವಾ ಸಂಘ ತಾಲೂಕು ಮಹಿಳಾ ಘಟಕ ವತಿಯಿಂದ ಮಕ್ಕಳ ಮುಕ್ತ ಚೆಸ್ ಸ್ಪರ್ಧೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು.

ಸ್ಪರ್ಧೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಉದ್ಘಾಟಿಸಿದರು. ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ನಿರ್ದೇಶಕ ಚಂದ್ರ ಕೋಲ್ಚಾರ್ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಪಿ.ಎಸ್.ಗಂಗಾಧರ, ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಸುಳ್ಯ ತಾಲೂಕು ಚೆಸ್ ಅಸೋಸಿಯೇಶನ್ ಅಧ್ಯಕ್ಷ ಶಾಂತಾರಾಮ ಭಟ್, ಕಾರ್ಯದರ್ಶಿ ಹರಿಪ್ರಸಾದ್ ಕೊಯಿಂಗಾಜೆ, ಎಂ.ಜಿ.ಎಂ. ವಿದ್ಯಾಸಂಸ್ಥೆಗಳ ಸಂಚಾಲಕ ದೊಡ್ಡಣ್ಣ ಬರೆಮೇಲು, ಮಹಿಳಾ ಘಟಕದ ಉಸ್ತುವಾರಿ ಸುರೇಶ್ ಎಂ.ಎಚ್., ತಾಲೂಕು ತರುಣ ಘಟಕದ ಅಧ್ಯಕ್ಷ ಪ್ರೀತಂ ಕೇರ್ಪಳ, ಮಹಿಳಾ ಘಟಕದ ಪೂರ್ವಾಧ್ಯಕ್ಷರಾದ ರೇಣುಕಾ ಸದಾನಂದ ಜಾಕೆ, ಪುಷ್ಪಾ ರಾಧಾಕೃಷ್ಣ, ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ಕಾರ್ಯದರ್ಶಿ ಸವಿತಾ ಸಂದೇಶ್, ಕೋಶಾಧಿಕಾರಿ ಜಯಶ್ರೀ ಪಲ್ಲತ್ತಡ್ಕ, ಚೆಸ್ ಸ್ಪರ್ಧೆ ಸಂಚಾಲಕಿ ಭಾರತಿ ಉಳುಮಾರು, ಸಹ ಸಂಚಾಲಕಿ ತಾರಾ ಮಾಧವ ಬೆಳ್ಳಾರೆ ಮೊದಲಾದವರಿದ್ದರು.

ಗೌಡ ಮಹಿಳಾ ಘಟಕದ ಕಾರ್ಯದರ್ಶಿ ಸವಿತಾ ಸಂದೇಶ್ ಸ್ವಾಗತಿಸಿದರು. ಅಧ್ಯಕ್ಷೆ ವಿನುತಾ ಪಾತಿಕಲ್ಲು ಪ್ರಸ್ತಾವಿಸಿದರು. ಮೀನಾಕ್ಷಿ ರಾಮಕಜೆ ಪ್ರಾರ್ಥಿಸಿದರು. ವಿದ್ಯಾ ಪಿ.ಬಿ. ನಿರೂಪಿಸಿದರು. ತಾರಾ ಮಾಧವ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net