More

    ಚೆಸ್‌ನಲ್ಲಿ ಪ್ರಥಮ ಸ್ಥಾನದೊಂದಿಗೆ ಸುಮುಕ್ ರಾಜ್ಯಮಟ್ಟಕ್ಕೆ ಆಯ್ಕೆ

    ಮಂಡ್ಯ: ನಗರದ 22ನೇ ಸೆಂಚುರಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಮಂಡ್ಯ ರಾಯಲ್ ಚೆಕ್ ಅಕಾಡೆಮಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
    ಜಿಲ್ಲೆಯ ವಿವಿಧೆಡೆಯಿಂದ 200ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಟೂರ್ನಿಯ 17 ವರ್ಷದ ಬಾಲಕರ ವಿಭಾಗದಲ್ಲಿ 7 ಸುತ್ತಿನಲ್ಲಿ ಏಳು ಅಂಕ ಪಡೆದು ಪ್ರಥಮ ಸ್ಥಾನದೊಂದಿಗೆ ಅಕಾಡೆಮಿಯ ಎಸ್.ಸುಮುಕ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂತೆಯೇ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ 2ನೇ ಸ್ಥಾನ ಪಡೆದಿರುವ ಗೀತಾಲಕ್ಷ್ಮೀ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಎಂದು ಅಕಾಡೆಮಿ ಮುಖ್ಯತರಬೇತುದಾರ ಎಂ.ಎಸ್.ಚೇತನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts