More

    ಛತ್ತೀಸ್‌ಗಢಕ್ಕೆ ಕಾಲಿಟ್ಟ “ಗೃಹಲಕ್ಷ್ಮೀ” – ಮಹಿಳೆಯರ ಖಾತೆಗೆ15 ಸಾವಿರ ರೂ. ಘೋಷಿಸಿದ ಕಾಂಗ್ರೆಸ್​…

    ರಾಯ್‌ಪುರ(ಛತ್ತೀಸ್‌ಗಢ): ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ‘ಗೃಹ ಲಕ್ಷ್ಮಿ ಯೋಜನೆ’ಯಡಿ 15,000 ರೂ. ಆರ್ಥಿಕ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಘೋಷಿಸಿದ್ದಾರೆ. ಈ ನೆರವು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು. ಈ ಸಂಬಂಧ ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

    ಇದನ್ನೂ ಓದಿ: ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ನಿಂದ ಉಂಡೆ ನಾಮ; ಕುಮಾರಸ್ವಾಮಿ ಟೀಕೆ
    “ದೀಪಾವಳಿಯ ಶುಭ ಸಂದರ್ಭದಲ್ಲಿ ಲಕ್ಷ್ಮಿ ದೇವಿಯ ಆಶೀರ್ವಾದದೊಂದಿಗೆ ನಾವು ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮ ಸರ್ಕಾರ ಮುಂದಿನ ಐದು ವರ್ಷ ಛತ್ತೀಸ್‌ಗಢವನ್ನು ಸಮೃದ್ಧವಾಗಿಸಲು ಮತ್ತು ಬಡತನ ನಿರ್ಮೂಲನೆ ಮಾಡುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತದೆ. ತಾಯಂದಿರು ಮತ್ತು ಸಹೋದರಿಯರು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕೆಂದು ನಾನು ಬಯಸುತ್ತೇನೆ ಎಂದು ಸಿಎಂ ಆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ..
    ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು ಯಾವುದೇ ಅರ್ಜಿಯನ್ನು ಪೂರ್ಣಗೊಳಿಸುವ ಅಗತ್ಯವಿಲ್ಲ ಮತ್ತು ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಸಿಎಂ ಹೇಳಿದರು. ಸರ್ಕಾರವೇ ಮನೆ ಮನೆಗೆ ಬಂದು ಸಮೀಕ್ಷೆ ನಡೆಸಲಿದ್ದು, ಎಲ್ಲವನ್ನೂ ಆನ್‌ಲೈನ್‌ನಲ್ಲಿ ಪೂರ್ಣಗೊಳಿಸಿ ನೇರವಾಗಿ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು ಎಂದು ಬಾಘೇಲ್ ಸ್ಪಷ್ಟಪಡಿಸಿದರು.

    ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನ.7 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನ.17 ರಂದು ನಡೆಯಲಿದೆ. ಫಲಿತಾಂಶ ಡಿ.3 ರಂದು ಪ್ರಕಟವಾಗಲಿದೆ.

    ಪ್ರೇಯಸಿ ಸಹಕರಿಸದಿದ್ದಕ್ಕೆ ರಾಡ್​ನಿಂದ ಹಲ್ಲೆನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts