ನಾರಾಯಣಪುರ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜತೆ ನಡೆದ ಎನ್ಕೌಂಟರ್ನಲ್ಲಿ (Chhattisgarh Encounter) ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ನಾರಾಯಣಪುರ ಪೊಲೀಸರು ವರದಿ ಮಾಡಿದ್ದಾರೆ.

ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿಯ ಅಭುಜ್ಮಾದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಚರಣೆ ನಡೆಸುವಾಗ ಸೋಮವಾರ ಸಂಜೆ ಸುಮಾರು 4 ಗಂಟೆಗೆ ಗುಂಡಿನ ಚಕಮಕಿ ನಡೆದಿದ್ದು , ಈ ಕಾರ್ಯಚರಣೆಯಲ್ಲಿ ಮೂವರು ನಕ್ಸಲರನ್ನು ಮೃತಪಟ್ಟಿದ್ದಾರೆ.
ಇದನ್ನೂ ಓದಿ: Secularism | ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ
ಘಟನಾ ಸ್ಥಳದಿಂದ ಎಕೆ-47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಹಾರಾಷ್ಟ್ರದ ನಾರಾಯಣಪುರ ಜಿಲ್ಲೆಯ ಗಡಿಗೆ ಸಮೀಪವಿರುವ ಮಾದ್ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಸೋಮವಾರ ಸಂಜೆ 4 ಗಂಟೆಗೆ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಛತ್ತೀಸ್ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್ಕೌಂಟರ್ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.
Israeli Strikes | ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ 182 ಮಂದಿ ಸಾವು, 700 ಮಂದಿಗೆ ಗಾಯ