

ಬಿಜಾಪುರ: ಛತ್ತೀಸ್‌ಗಢ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಮತ್ತು ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ 7.30 ಗಂಟೆ ಸುಮಾರಿಗೆ ಎನ್ಕೌಂಟರ್ ಆರಂಭವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ವಿಭಾಗೀಯ ಸಮಿತಿ ಸದಸ್ಯ ವಿನೋದ್ ಕರ್ಮಾ, ಆವಪಲ್ಲಿ ಎಲ್ಒಎಸ್ ರಾಜು ಪುಣೆಂ, ಎಸಿಎಂ ವಿಶ್ವನಾಥ್, ಗುಡ್ಡಂ ತೇಲಂ ಸೇರಿದಂತೆ 20 ರಿಂದ 25 ಮಂದಿ ನಕ್ಸಲರು ಇರುವ ಬಗ್ಗೆ ಮಾಹಿತಿ ಲಭಿಸಿದೆ.
ಛತ್ತೀಗಢ ಪೊಲೀಸ್ ಮತ್ತು ಕೋಬ್ರಾ ಘಟಕದ ಜಂಟಿ ತಂಡ ಕಾರ್ಯಚರಣೆ ನಡೆಸಿತು. ಏತನ್ಮಧ್ಯೆ ಭದ್ರತಾ ಪಡೆಗಳು ಅರಣ್ಯ ಪ್ರದೇಶದಲ್ಲಿ ಮತ್ತಷ್ಟು ಶೋಧಾ ಕಾರ್ಯ ನಡೆಸುತ್ತಿದೆ ಎನ್ನಲಾಗಿದೆ.