More

  ಚಿಕನ್​, ಮಟನ್​, ಮೊಟ್ಟೆ ಬೆಲೆ ಗಗನಕ್ಕೆ ಏರಿಕೆ; 1 ಕೆಜಿ ಕೋಳಿ ಮಾಂಸ 380 ರೂ.

  ಬೆಂಗಳೂರು: ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಇಷ್ಟು ದಿನ ತರಕಾರಿಗಳ ಬೆಲೆ‌ ಏರಿಕೆಯಾಗಿತ್ತು. ಇದೀಗ ಚಿಕನ್ ಬೆಲೆ ಗಗನಕ್ಕೆ ಏರಿಕೆಯಾಗಿದ್ದು, ಬೆಲೆ ಕೇಳಿ ಗ್ರಾಹಕರು ದಂಗಾಗಿದ್ದಾರೆ.

  ಹವಮಾನ ವೈಪರಿತ್ಯದಿಂದ ಮಾಂಸ ಮತ್ತು ಮೊಟ್ಟೆ ಬೆಲೆ ಕೂಡ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಕೆಜಿ ಚಿಕನ್​ಗೆ 380 ರೂ ಆಗಿದೆ. ಕೆಜಿ ಮಟನ್​ಗೆ 800 ರೂ. ಆಗಿದ್ದು, ಮೊಟ್ಟೆಗೆ 8 ರಿಂದ 7 ರೂ. ನಿಗದಿ‌‌ ಮಾಡಲಾಗಿದೆ. ಇಷ್ಟು ದಿನಗಳ ಕಾಲ ಒಂದು ಕೆಜಿ ಚಿಕನ್​ ಸರಿಸುಮಾರು 300 ರೂ. ಮಟನ್​ 600 ರಿಂದ 700 ರೂ ಇತ್ತು. ಆದರೆ ಏಕಾಏಕಿ ಬೆಲೆ ಏರಿಕೆಯಾಗಿದೆ.

  ಬೇಸಿಗೆ ಇದ್ದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಈ ವರ್ಷ ಕೋಳಿ ಸಾಕಾಣೆಯಾಗಿಲ್ಲ. ಇದೀಗ ಬೇಡಿಕೆ ಜಾಸ್ತಿಯಾಗಿದೆ. ಬೇಡಿಕೆಗೆ ತಕ್ಕಷ್ಟು ಕೋಳಿ‌‌ ಮಾಂಸದ ಪೂರೈಕೆ ಇಲ್ಲದ ಕಾರಣ ಮಾಂಸಾಹಾರ ಬೆಲೆ ಕೂಡ ಏರಿಕೆಯಾಗಿದೆ ಎನ್ನಲಾಗಿದೆ. ಮದುವೆ ಸೀಜನ್​ನಲ್ಲಿ ಮಾಂಸಾಹಾರಕ್ಕೂ ಹೆಚ್ಚು ಬೇಡಿಕೆ ಇರುವುದರಿಂದ, ಮುಂದಿನ ಒಂದು ತಿಂಗಳವರೆಗೂ ಮಾಂಸದ ಬೆಲೆ ಹೆಚ್ಚಾಗಲಿದೆ.‌

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts