ಕಣ್ಣೆದುರೇ ಸೋಂಕಿತರು ಸಾವನ್ನಪ್ಪುತ್ತಿರುವುದನ್ನು ಕಂಡು ಕೈ ಮುಗಿದು ಕಣ್ಣೀರಿಟ್ಟ ವೈದ್ಯಕೀಯ ಅಧಿಕಾರಿ!

up
Published on

ಲಖನೌ: ದೇಶಾದ್ಯಂತ ಕರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ನೂರಾರು ಜನರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕಣ್ಣೆದುರೇ ಜನರು ಸಾವನ್ನಪ್ಪುತ್ತಿರುವುದನ್ನು ನೋಡುತ್ತಿರುವ ವೈದ್ಯಕೀಯ ಸಿಬ್ಬಂದಿಯೂ ಮಾನಸಿಕವಾಗಿ ಕುಗ್ಗಲಾರಂಭಿಸಿದ್ದಾರೆ. ಅದೇ ರೀತಿ ಜಿಲ್ಲಾ ಮುಖ್ಯ ವೈದ್ಯಕೀಯ ಅಧೀಕ್ಷಕರೊಬ್ಬರು ಕೂ ಮುಗಿದು ಕಣ್ಣೀರಾಕಿರುವ ವಿಡಿಯೋ ವೈರಲ್​ ಆಗಿದೆ.

ಉತ್ತರ ಪ್ರದೇಶದ ಮಹಾರಾಜಗಂಜ್ ಜಿಲ್ಲೆಯ ಜಂಟಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಕಣ್ಣೀರು ಹಾಕಿರುವ ಅಧಿಕಾರಿ. ಆ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಅನೇಕರು ಆಕ್ಸಿಜನ್​ ಸಿಗದೆ ಒದ್ದಾಡುತ್ತಿದ್ದಾರೆ. ಕಣ್ಣೆದುರೇ ಜನರು ನರಳಾಡುತ್ತಿರುವುದನ್ನು ಕಂಡ ಅಧಿಕಾರಿ ನೋವಿನಿಂದ ಕಣ್ಣೀರಿಟ್ಟಿದ್ದಾರೆ. ಇದೆಂಥಾ ಪರಿಸ್ಥಿತಿ ಬಂದುಬಿಟ್ಟಿದೆ ಎಂದು ನೋವು ಹೊರಹಾಕಿದ್ದಾರೆ.

ಅಧಿಕಾರಿ ಕಣ್ಣೀರು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಅಧಿಕಾರಿಯ ನೋವನ್ನು ನೋಡಿ ನೆಟ್ಟಿಗರೂ ಕಣ್ಣೀರಿಡಲಾರಂಭಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net