ಒಳ ಮೀಸಲು ವಿಚಾರ ಸುಪ್ರೀಂಕೋರ್ಟ್ ತೀರ್ಪಿಗೆ ಮುಖ್ಯಮಂತ್ರಿ ಚಂದ್ರು ಸ್ವಾಗತ

chandru
Published on

ಬೆಂಗಳೂರು:ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹೆಚ್ಚು ಹಿಂದುಳಿದಿರುವ ಪರಿಶಿಷ್ಟ ಜಾತಿಗಳಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸ್ವಾಗತಿಸಿದ್ದಾರೆ.

ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿರುವ ಪರಿಶಿಷ್ಟ ಸಮಾಜದ ಜನತೆಗೆ ಸಿಕ್ಕ ಜಯ ಇದಾಗಿದ್ದು,ರಾಜ್ಯ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ ಕಳೆದ 12 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿರುವ ಎಲ್ಲ ಅಂಶಗಳನ್ನು ಜಾರಿಗೆ ತರಬೇಕು

ಪರಿಶಿಷ್ಟ ವರ್ಗಗಳ ಬಹಳ ವರ್ಷಗಳ ಆಂದೋಲನದ ಪರಿಣಾಮವಾಗಿ ರಾಜ್ಯ ಸರ್ಕಾರಕ್ಕೆ ನೀಡಿರುವ ಈ ಅಧಿಕಾರವನ್ನು ಶೋಷಿತ ಸಮಾಜಗಳನ್ನು ಮೇಲೆತ್ತುವಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಾದರಿಯಾಗಬೇಕಿದೆ ಹಾಗೂ ಅಹಿಂದ ವರ್ಗದಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ವರ್ಗಗಳೊಂದಿಗೆ ಸೂಕ್ತ ಸಮಾಲೋಚನೆ - ಸಂಧಾನಗಳ ಮೂಲಕ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net