ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿ ಮುಂದುವರಿಯಲಿ

ಬಸವನಬಾಗೇವಾಡಿ: ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಂ. ಅವರೇ ಮುಂದುವರಿಯಬೇಕು. ಕಂದಾಯ ಸಚಿವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಸರ್ಕಾರದ ಕ್ರಮ ಸರಿಯಲ್ಲ ಎಂದು ರೈತ ಹೋರಾಟಗಾರ ಅರವಿಂದ ಕುಲಕರ್ಣಿ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ನ್ಯಾಯವಾದಿ ಎಚ್.ಎಸ್.ಗುರಡ್ಡಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಅವರು ಮಾತನಾಡಿದರು.
ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅವರೇ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಆದರೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಂದಾಯ ಸಚಿವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ತಾರತಮ್ಯ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಬಸವನಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಅನುಷ್ಠಾನಕ್ಕೆ ತಂದಿದೆ. ಇದರ ವ್ಯಾಪ್ತಿಗೆ ಇಂಗಳೇಶ್ವರ, ಹೋರಿಮಟ್ಟಿ ಗುಡ್ಡ, ಮಸಬಿನಾಳ, ದೇಗಿನಾಳ, ದೇವರಹಿಪ್ಪರಗಿ, ಶಿವಣಗಿ, ತಂಗಡಗಿ ಗ್ರಾಮಗಳನ್ನು ಸೇರಿಸಲಾಗಿದೆ.

ಇನ್ನೂ ವಿಜಯಪುರ ಜಿಲ್ಲೆಯಲ್ಲಿ ಹಲವಾರು ಶರಣರ ಜನ್ಮಸ್ಥಳಗಳಿವೆ. ಅವುಗಳಲ್ಲಿ ದೇವರಹಿಪ್ಪರಗಿಯ ಮಡಿವಾಳ ಮಾಚಿದೇವರು, ಶಿವಣಗಿಯ ನೂಲಿ ಚಂದಯ್ಯ, ಸಿಂದಗಿ ತಾಲೂಕಿನ ಗೋಲಗೇರಿಯ ಕುರುಬ ಗೊಲ್ಲಾಳೇಶ್ವರ, ಇಂಡಿ ತಾಲೂಕಿನ ಹಾವಿನಾಳ ಕಲ್ಲಯ್ಯ, ಚಿಮ್ಮಲಗಿಯ ಚಂದಿಮರಸರು, ಮುದ್ದೇಬಿಹಾಳ ತಾಲೂಕಿನ ಬಾವೂರು ಬೊಮ್ಮಯ್ಯನವರು, ಭೈರವಾಡಗಿಯ ಆಯ್ದಕ್ಕಿ ಲಕ್ಕಮ್ಮ, ಆಲಮೇಲ ತಾಲೂಕಿನ ನಾಗರಹಳ್ಳಿ ಗ್ರಾಮದ ಗೊಲ್ಲಾಳೇಶ್ವರ ದೇವಸ್ಥಾನ, ಅಗ್ರಹಾರಗಳಾದ ಮನಗೂಳಿ, ಮುತ್ತಗಿ ಸೇರಿ ಇನ್ನೂ ಹಲವಾರು ಶರಣರು ಜನ್ಮ ತಾಳಿದ ಗ್ರಾಮಗಳನ್ನು ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗೆ ಪರಮಾಧಿಕಾರ ಇರುವುದರಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಲಿ ಅಥವಾ ಯಾವುದೇ ನಿರ್ಣಯ ಕೈಗೊಳ್ಳಲು ಸುಲಭವಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿ ಅವರೇ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಬೇಕು.

ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿಯನ್ನು ನೇಮಿಸಿರುವುದು ಸೂಕ್ತವಲ್ಲ. ವಿಜಯಪುರ ಜಿಲ್ಲಾಧಿಕಾರಿಯನ್ನು ಆಯುಕ್ತರನ್ನಾಗಿ ನೇಮಿಸಬೇಕು ಅಥವಾ ಇದಕ್ಕಾಗಿಯೆ ಪ್ರತ್ಯೇಕ ಐಎಎಸ್ ಅಧಿಕಾರಿಯನ್ನು ಆಯುಕ್ತರನ್ನಾಗಿ ನೇಮಿಸಬೇಕು. ಸ್ಥಳೀಯ ಪುರಸಭೆಯ ಪ್ರತಿನಿಧಿಗಳನ್ನು ಪದನಿಮಿತ್ತ ಸದಸ್ಯರನ್ನಾಗಿ ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿಗೆ ತೆಗೆದುಕೊಂಡಿರುವುದು ಸರಿಯಲ್ಲ.

ಹಿಂದಿನ ಐಎಎಸ್ ಅಧಿಕಾರಿ ಹಾಗೂ ಶರಣರ ಕ್ಷೇತ್ರಗಳ ಎಲ್ಲ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿಯಾಗಿದ್ದ ಡಾ.ಎಸ್.ಎಂ.ಜಾಮದಾರ್ ಅವರನ್ನು ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿಶೇಷ ಸಲಹೆಗಾರರನ್ನಾಗಿ ನೇಮಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರೈತ ಮುಖಂಡ ಈರಣ್ಣ ದೇವರಗುಡಿ, ಸಾಹಿತಿ ನಾಗಣ್ಣ ಚಿಗರಿ, ಹಣಮಂತ್ರಾಯ ಗುಣಕಿ ಇತರರಿದ್ದರು.

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…