More

  ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶದಿಂದ ವಾಪಸಾದ ಬಳಿಕ ಸಚಿವ ಸಂಪುಟ ವಿಸ್ತರಣೆ: ಡಿಸಿಎಂ ಅಶ್ವತ್ಥ ನಾರಾಯಣ

  ತುಮಕೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ವಿದೇಶದಿಂದ ಬಂಡ ಕೂಡಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್​ ತಿಳಿಸಿದರು.

  ಇಲ್ಲಿನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ನಿರ್ಧಾರ ಮಾಡಿಲ್ಲ. ಮುಖ್ಯಮಂತ್ರಿಗಳೇ ಸಚಿವ ಸಂಪುಟ ವಿಸ್ತರಣೆ ನಿಶ್ಚಯ ಮಾಡಲಿದ್ದಾರೆ ಸಿಎಎ ವಿರೋಧ ಸೇರಿ ಹಲವು ಕಾರಣಗಳಿಂದ ಸಂಪುಟ ವಿಸ್ತರಣೆ ವಿಳಂಬವಾಗಿದೆ ಎಂದು ಹೇಳಿದರು.

  ಪೌರತ್ವ ತಿದ್ದುಪಡಿ ಕಾಯ್ದೆಗೆ ವ್ಯಕ್ತವಾಗುತ್ತಿರುವ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ನಾಗರಿಕರ ಕಲ್ಯಾಣಕ್ಕಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಈ ಹಿಂದೆ ಎಲ್ಲ ಪಕ್ಷದ ನಾಯಕರೂ ಪ್ರಸ್ತಾಪ ಮಾಡಿದ್ದರು. ಆದರೆ ಅಂದು ಸಿಎಎ ಜಾರಿ ಪ್ರಸ್ತಾಪ ಮಾಡಿದ್ದವರೇ ಇಂದು ವಿರೋಧ ಮಾಡುತ್ತಿದ್ದಾರೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts