ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಸಿಎಂ ಎಚ್​ಡಿಕೆ ದಿಢೀರ್​ ಭೇಟಿ: ಕುತೂಹಲ ಕೆರಳಿಸಿದ ನಾಯಕರ ನಡೆ

ಬೆಂಗಳೂರು: ಕಾಂಗ್ರೆಸ್​ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ಹೆಚ್ಚುತ್ತಿರುವ ಬೆನ್ನಲ್ಲೇ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬುಧವಾರ ಮಧ್ಯಾಹ್ನ ಸದಾಶಿವನಗರದ ಖರ್ಗೆ ನಿವಾಸಕ್ಕೆ ಎಚ್​.ಡಿ. ಕುಮಾರಸ್ವಾಮಿ ದಿಢೀರ್​ ಭೇಟಿ ನೀಡಿ ಸುಮಾರು 30 ನಿಮಿಷ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿರುವ ಬೆನ್ನಲ್ಲೇ ಉಭಯ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ. ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ನಂತರದ ಬೆಳವಣಿಗೆಗಳು, ಸಿದ್ದರಾಮಯ್ಯ ಅವರ ನಡೆ ಕುರಿತು ಚರ್ಚೆ ನಡೆಸಲಾಗಿದೆ. ಜತೆಗೆ ಅತೃಪ್ತರ ಅಸಮಾಧಾನವನ್ನು ತಣಿಸುವ ಬಗ್ಗೆ ಖರ್ಗೆ ಅವರ ಬಳಿ ಸಿಎಂ ಸಲಹೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *