ತೈಲ ದರ ಇಳಿಕೆ ಕುರಿತ ಕೇಂದ್ರದ ನಿರ್ಧಾರವನ್ನು ಸ್ವಾಗತಿಸುತ್ತೇನೆ: ಸಿಎಂ ಎಚ್​ಡಿಕೆ

ಬೆಂಗಳೂರು: ದೇಶದ ಜನರ ಮೇಲಾಗುತ್ತಿರುವ ಹೊರೆಯನ್ನು ಮನಗಂಡು ಕೇಂದ್ರ ಸರ್ಕಾರ ಕೊನೆಗೂ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿದೆ. ಕೇಂದ್ರದ ಈ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಕೇಂದ್ರ ಸರ್ಕಾರ ತೈಲ ದರ ಕಡಿತ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಎಚ್​ಡಿಕೆ ರಾಜ್ಯ ಸರ್ಕಾರ ಈಗಾಗಲೇ ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ 2 ರೂ. ತೆರಿಗೆ ಇಳಿಕೆ ಮಾಡಿದೆ. ಕೇಂದ್ರ ಸರ್ಕಾರ ತೆರಿಗೆ ಕಡಿತಗೊಳಿಸುವ ಮುನ್ನವೇ ನಾವು ತೆರಿಗೆಯನ್ನು ಕಡಿತಗೊಳಿಸಿದ್ದೇವೆ ಎಂದು ತಿಳಿಸಿದರು.

ಸೆಪ್ಟೆಂಬರ್​ 17 ರಂದು ಕುಮಾರಸ್ವಾಮಿ ಅವರು ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿನ ತೆರಿಗೆ ಇಳಿಕೆ ನಿರ್ಧಾರವನ್ನು ಕಲಬುರಗಿಯ ಹೈದರಾಬಾದ್​ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಕೆ: ಎಚ್​ಡಿಕೆ

ಪೆಟ್ರೋಲ್​, ಡೀಸೆಲ್​ ದರದಲ್ಲಿ 2.50 ರೂ. ಇಳಿಕೆ