Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಕುಮಾರಸ್ವಾಮಿಯೆಂದರೆ ವಚನಭ್ರಷ್ಟತೆಗೆ ಇನ್ನೊಂದು ಹೆಸರು: ತೇಜಸ್ವಿನಿ ಗೌಡ

Saturday, 30.06.2018, 3:11 PM       No Comments

ದಾವಣಗೆರೆ: ಕುಮಾರಸ್ವಾಮಿ ಎಂದರೆ ವಚನ ಭ್ರಷ್ಟತೆ, ಅವಕಾಶವಾದಿತ್ವಕ್ಕೆ ಇನ್ನೊಂದು ಹೆಸರು ಎಂದು ವಿಧಾನಪರಿಷತ್​ ಸದಸ್ಯೆ ತೇಜಸ್ವಿನಿಗೌಡ ಆರೋಪಿಸಿದರು.

ಹರಿಹರ ತಾಲೂಕಿನ ಬೆಳ್ಳೋಡಿ ಸಮೀಪ ಕಾಗಿನೆಲೆ ಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಮಾತನಾಡಿದರು.
24 ಗಂಟೆಯೊಳಗೆ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಕುಮಾರಸ್ವಾಮಿಯವರಿಗೆ ಕುರ್ಚಿ ಮುಖ್ಯ. ಕುರ್ಚಿಗೋಸ್ಕರ ಏನು ಬೇಕಾದರೂ ಮಾಡುತ್ತಾರೆ.ರಾಜ್ಯದ ಜನರು ಸಂಕಷ್ಟದಲ್ಲಿದ್ದರೂ ಸರ್ಕಾರಕ್ಕೆ ಅದರ ಪರಿವೆಯೇ ಇಲ್ಲ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಹೇಳಿದರು.

ಕುಮಾರಸ್ವಾಮಿಯವರ ಮುಖವಾಡ ಕಳಚುವ ಕೆಲಸವನ್ನು ಜನರು ಶೀಘ್ರವೇ ಮಾಡಬೇಕು. ರಾಜ್ಯದ ಜನರದ್ದು ಈ ಬಾರಿ ದೌರ್ಭಾಗ್ಯ. ನನ್ನ ರಾಜಕೀಯ ಜೀವನದ ಎರಡನೇ ಇನಿಂಗ್ಸ್ ಆರಂಭಿಸುತ್ತಿದ್ದೇನೆ. ಅದಕ್ಕೆ ಎಲ್ಲ ಮಠಾಧೀಶರ ಆಶೀರ್ವಾದ ಪಡೆಯುತ್ತಿದ್ದೇನೆ ಎಂದರು.

Leave a Reply

Your email address will not be published. Required fields are marked *

Back To Top